ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನಮಾನ ನೀಡಿದ ಕಾಂಗ್ರೆಸ್ ಸರ್ಕಾರ; ‘ಕೈ’ ಕಾರ್ಯಕರ್ತರು ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರವು ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಪಕ್ಷದ ನಾಯಕರ ನಿರ್ಧಾರದ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ

54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ, ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್​​ ಅವರ ಹೆಸರೂ ಉಲ್ಲೇಖವಾಗಿದೆ. ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಬಿಜೆಪಿ

ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿರೋದೀಗ ಸ್ವಪಕ್ಷ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ: ರಿಜ್ವಾನ್ ಅರ್ಷದ್ ಆಗ್ರಹ

ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ದೊರೆಯುತ್ತಿದ್ದ ಈ ಸ್ಥಾನಮಾನವನ್ನು ಎಲ್ಲ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ಆದೇಶಿಸಿತ್ತು.

ಎಲ್ಲ 54 ನಿಗಮಗಳ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದ್ದು, ಅಗತ್ಯ ಸೌಲಭ್ಯಗಳನ್ನು ಆಯಾ ಇಲಾಖೆಗಳು ಒದಗಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಶಿಷ್ಟಾಚಾರ ವಿಭಾಗ ಹೊರಡಿಸಿದ್ದ ಆದೇಶದಲ್ಲಿ ತಿಳಿಸಲಾಗಿತ್ತು.

54 ನಿಗಮಮಂಡಳಿಗಳ ಅಧ್ಯಕ್ಷರ ಪಟ್ಟಿ

1. ಮಮತಾ ಗಟ್ಟಿ- ಅಧ್ಯಕ್ಷರು, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು

2. ಎನ್​.ರಂಗಸ್ವಾಮಿ-ಅಧ್ಯಕ್ಷರು, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು

3. ವಡ್ನಾಳ್ ಜಗದೀಶ್-ಅಧ್ಯಕ್ಷರು, ಕರ್ನಾಟಕ ಜೀವ ವೈವಿದ್ಯ ಮಂಡಳಿ

4. ಮಹೇಶ್ ಎಂ.ಎನ್​- ಅಧ್ಯಕ್ಷರು, ಕರ್ನಾಟಕ ತಜ್ಞರ ಮೌಲ್ಯಮಾಪನ ಸಮಿತಿ

5. ಗುರುಪ್ರಸಾದ್ ಬಿ-ಅಧ್ಯಕ್ಷರು, ರಾಜ್ಯ ಪರಿಸರ ಪರಿಣಾಮ ಮೌಲ್ಯ ಮಾಪನಾ ಪ್ರಾಧಿಕಾರ

6. ಬಿ.ಕೆ. ಅಲ್ತಾಫ್ ಖಾನ್-ಅಧ್ಯಕ್ಷರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ

7. ಜುಲ್ಫಿಕರ್ ಅಹಮದ್ ಖಾನ್-ಅಧ್ಯಕ್ಷರು, ಕರ್ನಾಟಕ ರಾಜ್ಯ ಹಜ್ ಸಮಿತಿ

8. ಮುಹಮದ್ ಅಲಿ ಅಲ್ ಹುಸೇನಿ-ಅಧ್ಯಕ್ಷರು, ಕರ್ನಾಟಕ ರಾಜ್ಯ ವಕ್ಸ್ ಮಂಡಳಿ

9. ಡಾ.ಎಸ್​.ಜಫೇಟ್-ಅಧ್ಯಕ್ಷರು, ಕರ್ನಾಟಕ್ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ

10. ವಿ.ಎಸ್. ಆರಾಧ್ಯ-ಅಧ್ಯಕ್ಷರು, ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ

11. ಅರುಣ್ ಕುಮಾ‌ರ್ ಪಾಟೀಲ್-ಅಧ್ಯಕ್ಷರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

12. ಲಕ್ಷ್ಮೀಶ.ಕೆ.ಎಂ- ಅಧ್ಯಕ್ಷರು, ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ನಿಗಮ ನಿಯಮಿತ

13. ಲಲಿತ್ ರಾಘವ್‌-ಅಧ್ಯಕ್ಷರು, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ

14. ಎಸ್ ಮನೋಹರ್- ಅಧ್ಯಕ್ಷರು, ದಿ ಮೈಸೂರು ಎಲೆಕ್ನಿಕಲ್ ಇಂಡಸ್ಟ್ರೀಸ್ ಲಿಮಿಟೆಡ್

15. ಕೀರ್ತಿ ಗಣೇಶ್- ಅಧ್ಯಕ್ಷರು, ಡಿ. ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ

16. ಜಿ. ಹೆಚ್. ಮರಿಯೋಜಿರಾವ್- ಅಧ್ಯಕ್ಷರು, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ

17. ಎಂ.ಎಸ್.ಆತ್ಮಾನಂದ- ಅಧ್ಯಕ್ಷರು, ಒಕ್ಕಲಿಗರ ಸಮುದಾಯಗಳ ಅಭಿವೃದ್ಧಿ ನಿಗಮ

18. ಸುಜ್ಞಾನಮೂರ್ತಿ ಪಿ.-  ಅಧ್ಯಕ್ಷರು, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ

19. ಭರಮಣ್ಯ ಉಪ್ಪಾರ- ಅಧ್ಯಕ್ಷರು, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ

20. ಶ್ರೀ ಎಂ.ಎಸ್.ಮುತ್ತುರಾಜ್- ಅಧ್ಯಕ್ಷರು, ಸಮಿತಾ ಸಮಾಜ ಅಭಿವೃದ್ಧಿ ನಿಗಮ

21. ನಂಜಪ್ಪ.ಸಿ- ಅಧ್ಯಕ್ಷರು, ಮಡಿವಾಳ ಮಾಚಿದೇವ ಅಭಿವೃದ್ಧಿನಿಗಮ

22. ಮಹೇಶ್ .ಎಂ- ಅಧ್ಯಕ್ಷರು, ಕಾಡುಗೊಲ್ಲ ಅಭಿವೃದ್ಧಿ ನಿಗಮ

23. ಎಸ್.ಗಂಗಾಧರ್- ಅಧ್ಯಕ್ಷರು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ

24. ನೀಲಕಂಠರಾವ್ ಎಸ್. ಮೂಲಗೆ- ಅಧ್ಯಕ್ಷರು, ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ, ಹುಬ್ಬಳ್ಳಿ

25. ಬಿ.ಎಸ್. ಕವಲಗಿ- ಅಧ್ಯಕ್ಷರು, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ, ವಿಜಯಪುರ

26. ಹೆಚ್.ಬಿ. ಮಂಜಪ್ಪ- ಅಧ್ಯಕ್ಷರು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ

27. ಆರ್‌. ಎಂ. ಮಂಜುನಾಥಗೌಡ- ಅಧ್ಯಕ್ಷರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ, ಶಿವಮೊಗ್ಗ

28. ಮುತ್ತಪ್ಪ- ಅಧ್ಯಕ್ಷರು, ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳಿ ನಿಯಮಿತ, ಮೈಸೂರು

29. ಎಂ. ಶ್ರೀನಿವಾಸ್- ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

30. ಆಯೂಬ್ ಖಾನ್- ಅಧ್ಯಕ್ಷರು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು

31. ಸೈಯದ್ ಮೊಹಮೂದ್ ಚಿಸ್ಮಿ- ಅಧ್ಯಕ್ಷರು, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರಗಿ

32. ಅಂಜನಪ್ಪ- ಅಧ್ಯಕ್ಷರು, ಕರ್ನಾಟಕ ರಾಜ್ಯ ಬೀಜ ನಿಗಮ

33. ಗಂಗಾಧರ್- ಅಧ್ಯಕ್ಷರು, ಮೈಸೂರು ಸಕ್ಕರೆ ಕಾರ್ಖಾನೆ ಮಂಡ್ಯ, ದಿ ಮೈಸೂರು ಷುಗ‌ರ್ ಕಂಪನಿ

34. ಜಿ.ಎಸ್. ಪಾಟೀಲ್- ಅಧ್ಯಕ್ಷರು, ಮೈಸೂರು ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು

35. ಸತೀಶ್ ಕೃಷ್ಣಸೈಲ್- ಅಧ್ಯಕ್ಷರು, ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್​ ಅಡ್ವರ್ಟೈಸಿಂಗ್ ಲಿಮಿಟೆಡ್

36. ಬಿ. ನಾಗೇಂದ್ರ ಕುಮಾರ್- ಅಧ್ಯಕ್ಷರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮನಿಯಮಿತ, ಹುಬ್ಬಳ್ಳಿ

37. ಜೆ.ಎಂ. ಗಣೇಶ- ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಮಕಾರರ ಮಹಾ ಮಂಡಳಿ ನಿಯಮಿತ

38. ಚೇತನ್ ಕೆ.- ಅಧ್ಯಕ್ಷರು, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿನಿಗಮ, ಬೆಳಗಾವಿ

39. ಕೆ. ವಿ. ರಾಮ್‌ಪ್ರಸಾದ್- ಅಧ್ಯಕ್ಷರು, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ

40. ಜಯಸಿಂಹ- ಅಧ್ಯಕ್ಷರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ

41. ಆರ್ ಸಂಪತ್ ರಾಜ್- ಅಧ್ಯಕ್ಷರು, ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ

42. ಎನ್ ಜಯದೇವನಾಯ್ಕ- ಅಧ್ಯಕ್ಷರು, ಕರ್ನಾಟಕ ತಾಂಡಾ/ಬಂಜಾರ ಅಭಿವೃದ್ಧಿ ನಿಗಮ

43. ಜಿ.ಎಸ್. ಮಂಜುನಾಥ್- ಅಧ್ಯಕ್ಷರು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ

44. ಮುರಳಿ ಅಶೋಕ್‌ ಸಾಲಪ್ಪ,- ಅಧ್ಯಕ್ಷರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ

45. ಪಲ್ಲವಿ.ಜಿ- ಅಧ್ಯಕ್ಷರು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ

46. ಮುಂಡರಗಿ ನಾಗರಾಜು- ಅಧ್ಯಕ್ಷರು, ಡಾ: ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ

47. ದೇವೇಂದ್ರಪ್ಪ ಮರ್ತೂರು- ಅಧ್ಯಕ್ಷರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ

48. ಮಾಲಾ ನಾರಾಯಣರಾವ್‌- ಅಧ್ಯಕ್ಷರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು

49. ಪದ್ಮಾವತಿ-  ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿಗಮ

50. ಕಾಂತಾ ನಾಯ್ಕ್- ಅಧ್ಯಕ್ಷರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ

51. ಪಿ. ರಘು- ಅಧ್ಯಕ್ಷರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ಬೆಂಗಳೂರು

52. ಬಿ. ಹೆಚ್. ಹರೀಶ್- ಅಧ್ಯಕ್ಷರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ಬೆಂಗಳೂರು

53. ಮಧುಸೂಧನ್ ಆರ್. ನಾಯ್ಕ್- ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು

54. ಡಾ. ಬಿ.ಡಿ. ಭೂಕಾಂತ್- ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ

ಇದನ್ನೂ ನೋಡಿ: ಗುತ್ತಿಗೆ ಜೀವನಕ್ಕೆ ಅಂತ್ಯ ಬೇಕು – ಫೆ 12ಕ್ಕೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಮುಷ್ಕರ | ಎಸ್ ವರಲಕ್ಷ್ಮಿ

Donate Janashakthi Media

Leave a Reply

Your email address will not be published. Required fields are marked *