ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಜೊತೆಗೂಡಿ ಬಿಬಿಎಂಪಿ ದಕ್ಷಿಣ ವಯಲದ ವಾರ್ ರೂಂ ನಲ್ಲಿ ನಡೆಯುತ್ತಿದೆ ಎನ್ನಲಾದ ಹಾಸಿಗೆ ಅವ್ಯವಹಾರ ಬಗ್ಗೆ ದಾಳಿ ನಡೆಸಿದ ತಂಡದ ಜೊತೆಗೆ ಭಾಗಿಯಾದ ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ಅವರೇ ಹಗರಣದ ಪ್ರಮುಖ ಆರೋಪಿಯಾಗಿ ಮೇಲ್ನೋಟನಕ್ಕೆ ಕಂಡುಬಂದಿದ್ದು ಕೂಡಲೇ ಅವರನ್ನು ಬಂಧಿಸಿ ಸಂಪೂರ್ಣವಾಗಿ ವಿಚಾರಣೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಆರೋಪಿಸಿದೆ.
ಹಾಸಿಗೆ ಹಂಚಿಕೆಯಲ್ಲಿ ದಂಧೆಯಾಗುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕರು ಜೊತೆಯಾಗಿದ್ದರು. ಈಗ ಸದ್ಯ ದಂಧೆಯಲ್ಲಿ ಶಾಸಕರೇ ಶಾಮೀಲಾಗಿದ್ದರು ಎಂದು ಎಲ್ಲೆಡೆ ಆರೋಪಗಳು ಕೇಳಿ ಬರುತ್ತಿವೆ.
ಇದನ್ನು ಓದಿ: ತೇಜಸ್ವಿ ಸೂರ್ಯ ಹೇಳುವಂತೆ ಬೆಂಗಳೂರಲ್ಲಿ ಹಾಸಿಗೆ ಲಭ್ಯತೆ ಶೂನ್ಯಕ್ಕೆ ಇಳಿದಿಲ್ಲ
ಈ ಬಗ್ಗೆ ಕಾಂಗ್ರೆಸ್ ಪಕ್ಷವೂ ಟ್ವೀಟ್ ಮಾಡಿದ್ದು ʻಚಿತೆಯಲ್ಲಿ ಚಳಿ ಕಾಯಿಸುವ ನೀಚತನ ಇರುವುದು ಬಿಜೆಪಿಗೆ ಮಾತ್ರ. ಕಳೆದ ಭಾರಿ ಬೆಡ್ ಖರೀದಿ ಹಗರಣ, ಈ ಭಾರಿ ಬೆಡ್ ಬ್ಲಾಕಿಂಗ್ ಹಗರಣ. ಹಗರಣ ಮಾಡಿದ ತೋಳಗಳೇ ಮೊಲಗಳಂತೆ ಮುಖವಾಡ ಧರಿಸಿ, ಹಗರಣ ಬಯಲಿಗೆಳೆಯುವ ಮಹಾನಾಟಕ ಮಾಡಿದ್ದವು. ತಮ್ಮ ಭ್ರಷ್ಟಾಚಾರ ಮರೆಮಾಚಲು ಕೋಮು ಬಣ್ಣ ಲೇಪಿಸಲು ಯತ್ನಿಸಿದ ಕುತಂತ್ರ ಬೆತ್ತಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ.
ಎಂ. ಸತೀಶ್ ರೆಡ್ಡಿ ಮೇಲೆ ಇರುವ ಆರೋಪ
ಶಾಸಕ ಎಂ. ಸತೀಶ್ ರೆಡ್ಡಿ ಕಡೆಯವರೇ ಹಾಸಿಗೆ ಹಂಚಿಕೆ ಅವ್ಯವಹಾರದಲ್ಲಿ ನೇರ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡದ ಶಾಸಕ ಎಂ. ಸತೀಶ್ ರೆಡ್ಡಿ ಯವರೇ ದೊಡ್ಡ ತೊಡಕಾಗಿದ್ದಾರೆ. ತಮ್ಮ ಅನುಯಾಯಿಗಳ ಮೂಲಕ ತಮಗೆ ಬೇಕಾದವರಿಗೆ ಕೋವಿಡ್ ಹಾಸಿಗೆಗಳನ್ನು ಹಂಚಿಕೆ ಮಾಡುತ್ತಿದ್ದರು. ಇದಕ್ಕೆ ಅಡ್ಡಿಯಾದರೆ, ವಾರ್ ರೂಂನವರ ಜೊತೆ ಜಗಳವಾಡುತ್ತಿದ್ದರು ಎನ್ನುವ ಮಾಹಿತಿಯೂ ಈಗ ಹೊರಬರುತ್ತಿವೆ.
ಇದನ್ನು ಓದಿ: ಬಿಬಿಎಂಪಿ ಬೆಡ್ ಹಗರಣ : ಹಗರಣದ ಹಿಂದಿರುವವರು ಯಾರು?
ವಾರ್ ರೂಮ್‌ನಲ್ಲಿ ಕೆಲಸ ಮಾಡುವುದಕ್ಕೆ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಅವಕಾಶವನ್ನು ನೀಡಬೇಕು, ಇಲ್ಲವಾದಲ್ಲಿ ವಾರ್ ರೂಮ್ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಖುದ್ದು ಎಂ. ಸತೀಶ್ ರೆಡ್ಡಿ ಅವರೇ ವಾರ್ ರೂಮ್ ಉಸ್ತುವಾರಿಗಳಿಗೆ ನೀಡಿದ್ದರು ಎನ್ನಲಾಗಿದೆ.
ಶಾಸಕರು ಶಿಫಾರಸು ಮಾಡಿದವರಿಗೆ ಹಾಸಿಗೆಗಳನ್ನು ನೀಡಲಾಗುತ್ತಿತ್ತು ಎನ್ನುವ ಆರೋಪಗಳ ನಡುವೆಯೇ ಹಾಸಿಗೆಗಳನ್ನು ಸಂಕಷ್ಟದಲ್ಲಿರುವ ಸೋಂಕಿತರಿಗೆ ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂಬ ಗಂಭೀರವಾದ ಆರೋಪವಿದೆ.