ಪಂಜಾಬ್‌ನಲ್ಲಿ ಕಾಂಗ್ರೆಸ್‌ನಿಂದ ‘ಮಾಂಗ್ದಾ ಇನ್ಸಾಫ್’ ಅಭಿಯಾನ: ಸೈಕಲ್ ಯಾತ್ರೆಗೆ ಸಿದ್ಧತೆ

Please follow and like us:
ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ‘ಪಂಜಾಬ್ ಮಾಂಗ್ದಾ ಇನ್ಸಾಫ್’ (ಪಂಜಾಬ್ ನ್ಯಾಯ ಕೇಳುತ್ತಿದೆ) ಅಭಿಯಾನ ಆರಂಭಿಸಲು ಸಜ್ಜಾಗಿದೆ. ಈ ಅಭಿಯಾನದ ಭಾಗವಾಗಿ ಕಾರ್ಯಕರ್ತರ ಸಭೆ, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸೈಕಲ್ ಯಾತ್ರೆ ಆಯೋಜಿಸಲಾಗುವುದು ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪರಗತ್ ಸಿಂಗ್ ತಿಳಿಸಿದ್ದಾರೆ. ಪಂಜಾಬ್‌

ನವೆಂಬರ್ 4ರಂದು ಸಂಗ್ರೂರ್‌ನಲ್ಲಿ ನಡೆದ ‘ಇನ್ಸಾಫ್ ರ‍್ಯಾಲಿ’ ಬಳಿಕ ಕಾಂಗ್ರೆಸ್ ತನ್ನ ರಾಜಕೀಯ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಿದೆ. ನವೆಂಬರ್ 12ರಿಂದ ಹೊಸ ಅಭಿಯಾನ ಆರಂಭವಾಗಲಿದ್ದು, ಮೊದಲ ದಿನ ಐಟಿ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಮತ್ತು ಕಾರ್ಯಕರ್ತರ ಸಭೆಗಳು ನಡೆಯಲಿವೆ. ನವೆಂಬರ್ 13ರಂದು ಸೈಕಲ್ ಯಾತ್ರೆ ಆರಂಭವಾಗಲಿದೆ.

ಇದನ್ನೂ ಓದಿ : ಟಿಪ್ಪು ಇತಿಹಾಸ ಅಳಿಸಲು ಸಾಧ್ಯವಿಲ್ಲ: ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪರಗತ್ ಸಿಂಗ್ ಹೇಳಿದ್ದಾರೆ.ಇದೇ ವೇಳೆ, ಮುಂಬರುವ ಚುನಾವಣೆಯ ಪ್ರಣಾಳಿಕೆ ಸಿದ್ಧಪಡಿಸಲು ಪಕ್ಷದ ಹಿರಿಯ ನಾಯಕರು, ಶಾಸಕರು ಮತ್ತು ಸಂಸದರ ಸಲಹೆಗಳನ್ನು ಪಡೆಯಲಾಗಿದೆ. ಪ್ರಣಾಳಿಕೆ ಸಮಿತಿ ಸಭೆಯಲ್ಲೂ ಈ ಕುರಿತು ಚರ್ಚೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಪಂಜಾಬ್‌

ಅಭಿಯಾನದಲ್ಲಿ ಮಾದಕವಸ್ತು ಸಮಸ್ಯೆ ನಿರ್ಮೂಲನೆ, ಗೂಂಡಾಗಿರಿ ನಿಯಂತ್ರಣ, ರೈತರ ಹಕ್ಕುಗಳ ರಕ್ಷಣೆ, ಯುವಕರಿಗೆ ಉದ್ಯೋಗಾವಕಾಶ ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಕಾಂಗ್ರೆಸ್ ಆದ್ಯತೆ ನೀಡಿದೆ.

ನವೆಂಬರ್ 4ರ ಸಂಗ್ರೂರ್ ರ‍್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು. ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಸರ್ಕಾರ ಮಾದಕವಸ್ತು ಸಮಸ್ಯೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದರು. 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 18 ಸ್ಥಾನಗಳನ್ನು ಪಡೆದುಕೊಂಡಿತ್ತು. ಪಂಜಾಬ್‌

ಇದನ್ನೂ ನೋಡಿ : ಟಿಪ್ಪು ಇತಿಹಾಸ ಅಳಿಸಲು ಸಾಧ್ಯವಿಲ್ಲ: ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *