ಬೆಂಗಳೂರು : ಮೊದಲ ಬಾರಿ ಮತದಾನ ಮಾಡುವ ಯುವ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದ್ದು, ಈ ನಿಟ್ಟಿನಲ್ಲಿ ‘ಯುವ ಮತ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ್ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಮೊದಲ ಬಾರಿ ಓಟ್ ಮಾಡುವವರತ್ತ ಕಾಂಗ್ರೆಸ್ ಫೋಕಸ್ ಮಾಡಿದ್ದು, ಈ ಬಾರಿ ದೊಡ್ಡ ಸಂಖ್ಯೆಯಲ್ಲಿರುವ ಯುವ ಮತದಾರರನ್ನು ಸೆಳೆಯಲು ಅಭಿಯಾನ ಈ ಹಮ್ಮಿಕೊಂಡಿದೆ. ಅಭಿಯಾನದ ಕುರಿತಾಗಿ ಮಾತನಾಡಿದ ರಕ್ಷಾ ರಾಮಯ್ಯ, 2018 ಚುನಾವಣೆಯಲ್ಲಿ 48% ಮಾತ್ರ ಯುವ ಮತ ಚಲಾವಣೆ ಆಗಿತ್ತು. ಈ ನಿಟ್ಟಿನಲ್ಲಿ ಯುವಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಯುವ ಸಮೂಹದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದು, ಮತದಾನ ಜಾಗೃತಿ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳುವುದು ಹಾಗೂ ಉದ್ಯೋಗ, ಶಿಕ್ಷಣ, ಹವಾಮಾನ ಬದಲಾವಣೆ ಮುಂತಾದ ವಿಚಾರಗಳ ಬಗ್ಗೆ ಯುವ ಸಮೂಹದ ಅಭಿಪ್ರಾಯ ಪಡೆಯುವುದು ಅಭಿಯಾನದ ಭಾಗವಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗದ ಪ್ರಕಾರ ಮೊದಲ ಬಾರಿ ಮತದಾನ ಮಾಡುಚವ ಯುವ ಮತದಾರರ ಸಂಖ್ಯೆ 9,58, 806 ರಷ್ಟು ಇದೆ. ಆದರೆ, ಕಳೆದ ಬಾರಿ ಅಂದರೆ 2018 ರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 48% ಮತದಾನ ಆಗಿತ್ತು. ಈ ನಿಟ್ಟಿನಲ್ಲಿ ಯುವ ಮತದಾರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಅವರನ್ನು ಕಾಂಗ್ರೆಸ್ ನತ್ತ ಸೆಳೆಯುವ ನಿಟ್ಟಿನಲ್ಲಿ ಯುವ ಮತ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಇದನ್ನೂ ಓದಿ : ಆಪರೇಷನ್ ಹಸ್ತದ ಮೂಲಕ ತೆನೆ, ಕಮಲದ ನಾಯಕರಿಗೆ ಗಾಳ ಹಾಕಿದ ಕಾಂಗ್ರೆಸ್
ಚುನಾವಣೆಗೆ ಖಂಡಿತಾ ಸ್ಪರ್ಧೆ ಮಾಡುತ್ತೇನೆ :
ಇನ್ನು ಇದೇ ಸಂದರ್ಭದಲ್ಲಿ ಚುನಾವಣಾ ಸ್ಪರ್ಧೆ ಬಗ್ಗೆ ಮಾತನಾಡಿದ ರಕ್ಷಾ ರಾಮಯ್ಯ, ಖಂಡಿತ ನಾನು ಚುನಾವಣೆಗೆ ನಿಲ್ಲುತ್ತೇನೆ. ಆದರೆ ಈಗ ನನಗೆ ಈ ಜವಾಬ್ದಾರಿ ಕೊಟ್ಟಿದ್ದಾರೆ. ಮೊದಲು ಈ ಕಾರ್ಯಕ್ರಮ ಯಶಸ್ವಿ ಮಾಡೋಣ. ನಂತರ ಸ್ಪರ್ಧೆ ಬಗ್ಗೆ ಯೋಚನೆ ಮಾಡೋಣ.ಮೊದಲು ಪಕ್ಷ ಏನು ಜವಾಬ್ದಾರಿ ಕೊಟ್ಟಿದೆ ಮಾಡುತ್ತೇನೆ ಎಂದರು.