ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಶಾಲಾ ಮಕ್ಕಳ ಭವಿಷ್ಯದ ಜೊತೆ ರಾಜ್ಯ ಸರ್ಕಾರದ ಚೆಲ್ಲಾಟ – ಸಿದ್ದರಾಮಯ್ಯ ಆರೋಪ

ಬೆಂಗಳೂರು: ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಶಾಲಾ ಮಕ್ಕಳ ಭವಿಷ್ಯದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಶಾಲಾ ಬಡ ಮಕ್ಕಳಿಗಾಗಿ ನಮ್ಮ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲು ಸಿದ್ದರಾಮಯ್ಯ ಸರ್ಕಾರ ಹೊರಟಿದೆ. ವಿದ್ಯಾಸಿರಿ ಯೋಜನೆಗೆ ಹಣ ನೀಡುತ್ತಿಲ್ಲ, ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಊಟಕ್ಕೂ ಕಲ್ಲು ಹಾಕುತ್ತಿದೆ. ಈಗ ಸೈಕಲ್, ಶೂ, ಸಾಕ್ಸ್ ಗಳನ್ನು ಕೂಡಾ ಕಿತ್ತುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ವಿದ್ಯಾರ್ಥಿನಿಯರಿಗೆ ಸೈಕಲ್ ಗಳನ್ನು ನೀಡುವ ಯೋಜನೆ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರದ್ದು, ಆ ಯೋಜನೆಯನ್ನು ಕೂಡಾ ಸ್ಥಗಿತಗೊಳಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ ಕಲಿಕಾ ಹಾಳೆಗಳನ್ನು ಶಿಕ್ಷಕರು ಸ್ವಂತ ಖರ್ಚಿನಿಂದ ಡೌನ್ ಲೋಡ್ ಮಾಡಿಕೊಂಡು, ಜೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮಂದೆ ಬರಲಾರದು. ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ “ವಿದ್ಯಾಪ್ರವೇಶ” ಮತ್ತು “ಕಲಿಕಾ ಚೇತರಿಕೆ” ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಕೂಡಾ ಪೂರೈಸಲು ಬಿಜೆಪಿ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಆರೋಪ ಮಾಡಿದ್ದಾರೆ.

ಒಂದೆಡೆ ರಾಜ್ಯ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ.

ಶಾಲಾ ಬಡ ಮಕ್ಕಳಿಗಾಗಿ ನಮ್ಮ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲು ಸರ್ಕಾರ ಹೊರಟಿದೆ. ವಿದ್ಯಾಸಿರಿ ಯೋಜನೆಗೆ ಹಣ ನೀಡುತ್ತಿಲ್ಲ, ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿ ಊಟಕ್ಕೂ ಕಲ್ಲು ಹಾಕುತ್ತಿದೆ. ಈಗ ಸೈಕಲ್, ಶೂ, ಸಾಕ್ಸ್ ಗಳನ್ನು ಎಂದು ರಾಜ್ಯ ಸರ್ಕಾರದ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *