ತೆಲಂಗಾಣ: ಇಂದು (ಮಂಗಳವಾರ) ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬ ಆಡಳಿತಾರೂಢ ಕಾಂಗ್ರೆಸ್ ನಾಯಕನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಾರೆಡ್ಡಿ (56) ಮೃತ ಕಾಂಗ್ರೆಸ್ ನಾಯಕ.
ಜಗ್ತಿಯಾಲ ಜಿಲ್ಲೆಯ ಜಬಿತಾಪುರ ಗ್ರಾಮದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಇವರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಗಂಗಾರೆಡ್ಡಿ ರನ್ನು ಕಾರಿನಿಂದ ಇಳಿದ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲಿಸರು ಹೇಳಿದ್ದಾರೆ.
ಇದನ್ನೂ ಓದಿ: ಮರಕುಂಬಿಯ ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ – 101 ಜನರ ವಿರುದ್ಧದ ಆರೋಪ ಸಾಬೀತು
ಸದ್ಯ ಮೃತದೇಹವನ್ನು ಜಗ್ತಿಯಾಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಎಂಎಲ್ಸಿ ಜೀವನ್ ರೆಡ್ಡಿ ಅವರ ಆಪ್ತರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಹಳೆಯ ವೈಷಮ್ಯದಿಂದ ಕೊಲೆ ನಡೆದಿರಬಹುದು. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ನೋಡಿ: ದೀನ ದಯಾಳ್ ಉಪಾಧ್ಯರನ್ನು ಕೊಂದವರು ಯಾರು? ಸಂಘಪರಿವಾರಕ್ಕೆ ಸವಾಲೆಸೆದ Janashakthi Media