ಬೆಂಗಳೂರು: ಶಿವಾನಂದ ಸರ್ಕಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದಲ್ಲಿ ಶಿವಾನಂದ ಸರ್ಕಲ್ ನಲ್ಲಿರುವ ಬಿ.ವೈ.ವಿಜಯೇಂದ್ರ ನಿವಾಸದ ಎದರು ಪ್ರತಿಭಟನೆ ನಡೆಸುತ್ತಿದ್ದು, ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಿ ಪೋಸ್ಟರ್ ಅಂಟಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: ಸಮಸಮಾಜದ ಕನಸು ಕಂಡಾಕೆ
ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ನೋಡಿ: ಕುವೆಂಪು 120| ಕುವೆಂಪು ಓದು – ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ Janashakthi Media