ಮಂಗಳೂರು| ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

ಮಂಗಳೂರು: ಕಾಂಗ್ರೆಸ್ ನಾಯಕರು ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು, ಡಿಸೆಂಬರ್‌ 20ರಂದು ಮಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ : ಮುನೀರ್ ಕಾಟಿಪಳ್ಳ

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಆರಂಭವಾದ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ಬಿಜೆಪಿ ಕಚೇರಿಯತ್ತ ಸಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ.

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ನೋಡಿ: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಸ್ಥಿತಿಗತಿಯೇನು ಸಚಿವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *