ಬೆಂಗಳೂರು: ನಗರದ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ, ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 4ರಂದು ನಿಧನರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಎಚ್.ವೈ ಮೇಟಿ, ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಇದನ್ನೂ ಓದಿ: ಮೈಸೂರು | ‘ಬಂಡವಾಳಶಾಹಿ ವ್ಯವಸ್ಥೆ ವಿರುದ್ಧ ಹೋರಾಡಲು ಮಾರ್ಕ್ಸ್ ಜೊತೆಗೆ ಅಂಬೇಡ್ಕರ್ ಬೇಕು -ರತಿರಾವ್
ಎಚ್.ವೈ ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಶಾಸಕ
2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ವೈ ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ನೋಡಿ: ಶಿಕ್ಷಣ ಇಲ್ಲದ ಪ್ರಜಾಪ್ರಭುತ್ವದಿಂದ ಸಮಾನತೆ ಅಸಾಧ್ಯ: ಕಿರಣ್ ಗಾಜನೂರು Janashakthi Media
