ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಗುರುವಾರ ಮತ್ತೆ ಬಿಜೆಪಿಗೆ ಸೇರಿದ್ದಾರೆ. ಕಳೆದ 10 ವರ್ಷಗಳಲ್ಲಿ ದೇಶವನ್ನು ಗಟ್ಟಿಗೊಳಿಸಲು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶ ಬಲಿಷ್ಠವಾಲು ಮತ್ತು ನರೇಂದ್ರ ಮೋದಿ ಕೆಲಸ ಮಾಡಿದ್ದಾರೆ. ಈ ನಂಬಿಕೆಯ ಮೇಲೆ ನಾನು ಪಕ್ಷಕ್ಕೆ ಮತ್ತೆ ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಪಕ್ಷಕ್ಕೆ ವಾಪಾಸಾಗುವಂತೆ ವಿನಂತಿ ಮಾಡುತ್ತಲೆ ಇದ್ದರು. ಅಲ್ಲದೆ, ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೂಡಾ ವಾಪಾಸಾಗುವಂತೆ ಕೇಳಿಕೊಂಡಿದ್ದರು. ಇಂದು ಬೆಳಿಗ್ಗೆ ಅಮಿತ್ ಷಾ ಅವರನ್ನು ಭೇಟಿಯಾಗಿದ್ದೆ, ಅವರು ನನ್ನನ್ನು ಬಹಳ ಗೌರವದಿಂದ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರನ್ನು ನಾನು ಈಗ ಭೇಟಿಯಾಗಲಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆ ‘ಪ್ರತಿಗಾಮಿ ರಾಜಕೀಯ’ದ ದ್ಯೋತಕ, ದೇಶದ ಭವಿಷ್ಯವು ಅಪಾಯದಲ್ಲಿದೆ – ಖ್ಯಾತ ನಿರ್ದೇಶಕ ಪಾ ರಂಜಿತ್
“ಬಿಜೆಪಿಗೆ ಮತ್ತೆ ಸೇರುತ್ತಿರುವುದು ನನಗೆ ಬಹಳ ಸಂತೋಷದ ಸಂಗತಿ. ನಾನು ಈಗ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯನಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಬಗ್ಗೆ ಪರಿಷತ್‌ನ ಸಭಾಪತಿ ಕರೆ ಮಾಡಿ ತಿಳಿಸಿದ್ದೇನೆ ಮತ್ತು ಮೇಲ್ ಕೂಡಾ ಕಳುಹಿಸಿದ್ದೇನೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದನ್ನು ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮೈಲ್ ಮಾಡಿದ್ಧೇನೆ” ಎಂದು ಅವರು ಹೇಳಿದ್ದಾರೆ.
Former Karnataka CM Shri @JagadishShettar joins BJP at party headquarters in New Delhi. #JoinBJP https://t.co/inNAusZgeC
— BJP (@BJP4India) January 25, 2024
“ಕಳೆದ 10 ವರ್ಷಗಳಿಂದ ದೇಶದ ರಕ್ಷಣೆ ಮತ್ತು ಹಿತರಕ್ಷಣೆ ಮಾಡುತ್ತಾ, ದೇಶವನ್ನು ಪ್ರಗತಿ ಮಾಡಿರುವ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು. ಅವರ ನಾಯಕತ್ವದಲ್ಲಿ ದೇಶಕ್ಕೆ ಹೆಚ್ಚಿನ ಶಕ್ತಿ ಬರಬೇಕು. ಈ ಹಿನ್ನಲೆಯಲ್ಲಿ ನಾನು ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿದ್ದೇನೆ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಲಿದ್ದೇನೆ. ದೇಶವನ್ನು ಗಟ್ಟಿಗೊಳಿಸಲು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶ ಬಲಿಷ್ಠವಾಲು ಮತ್ತು ನರೇಂದ್ರ ಮೋದಿ ಕೆಲಸ ಮಾಡಿದ್ದಾರೆ. ಈ ನಂಬಿಕೆಯ ಮೇಲೆ ನಾನು ಪಕ್ಷಕ್ಕೆ ಮತ್ತೆ ಸೇರುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ 11ನೇ ಬಾರಿಗೆ ಮುಂದೂಡಿದ ಸುಪ್ರೀಂಕೋರ್ಟ್!
ಅಲ್ಲದೆ, ಕಾಂಗ್ರೆಸ್ ಪಕ್ಷವು ನಾನು ಸೇರಿದಾಗ ಅವರು ನನ್ನನ್ನು ಚೆನ್ನಾಗಿ ನಡೆಸಿಕೊಂಡು ಒಳ್ಳೆಯ ಸ್ಥಾನವನ್ನು ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಅವರು ಹೇಳಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಗೆ ಅವರು ತೆರಳಿದ್ದರು. ಶೆಟ್ಟರ್ ಅವರಿಗೆ ಕಳೆದ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ ಪಕ್ಷದೊಂದಿಗೆ ಮುನಿಸಿಕೊಂಡಿದ್ದ ಅವರು ಕಾಂಗ್ರೆಸ್ ಸೇರಿ ಚುನಾವಣೆ ಸ್ಪರ್ಧಿಸಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತದ್ದರು. ಅದಾಗ್ಯೂ ಕಾಂಗ್ರೆಸ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡಿತ್ತು.
ಶೆಟ್ಟರ್ ಜೊತೆಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೂಡಾ ಬಿಜೆಪಿಯಿಂದ ಹೊರನಡೆದಿದ್ದರು. ಈ ತಿಂಗಳ ಆರಂಭದಲ್ಲಿ, ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳನ್ನು ನಿರಾಕರಿಸಿದ್ದರು.
ವಿಡಿಯೊ ನೋಡಿ: ಶ್ರಮಿಕರ ಬದುಕು ಉಳಿಸಿ – ಮೋದಿ ಸರ್ಕಾರದ ವಿರುದ್ಧ ಬೀದಿಗಿಳಿದ ಕಾರ್ಮಿಕರು Janashakthi Media