ಕಲಾಪದ‌ ಮಧ್ಯೆ ಕುಸಿದುಬಿದ್ದ ಕಾಂಗ್ರೆಸ್‌ ಸಂಸದೆ

ನವದೆಹಲಿ :ಇಂದಿನ ರಾಜ್ಯಸಭಾ ಕಲಾಪ ನಡೆಯುತ್ತಿದ್ದಾಗ ಕಾಂಗ್ರೆಸ್​​​ನ ರಾಜ್ಯಸಭಾ ಸಂಸದೆ ಪುಲೋ ದೇವಿ ನೇತಮ್ ಅ ಅಸ್ವಸ್ಥಗೊಂಡು ಕುಸಿದುಬಿದ್ದ ಘಟನೆ ನಡೆದಿದೆ.

ಇಂದಿನ ಕಲಾಪದಲ್ಲಿ ನೀಟ್ ಪರೀಕ್ಷೆಯ ಅಕ್ರಮದ ವಿಚಾರವಾಗಿ ವಿಪಕ್ಷಗಳು ತೀವ್ರವಾಗಿ ಪ್ರತಿಭಟನೆ ನಡೆಸಿದ್ದವು. ಇದೇ ವೇಳೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.  ಕುಸಿದುಬಿದ್ದ ಸಂಸದೆಯನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ RML ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ : ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ : ಅಧಿಕಾರಿಗಳ ವರ್ಗಾವಣೆಗೆ ಮುಂದಾದ ಯೋಗಿ ಸರ್ಕಾರ್‌

ಇನ್ನು ರಾಜ್ಯಸಭಾ ಕಲಾಪದ ವೇಳೆ ನೀಟ್ ಪರೀಕ್ಷೆಯ ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಇದನ್ನು ನೋಡಿ : ಮೋದಿ 3.O ಸರ್ಕಾರ ತನ್ನ ಹಿಂದಿನ ಸರ್ವಾಧಿಕಾರಿ ನೀತಿ ಮುಂದುವರೆಸುತ್ತದೆಯೇ? Janashakthi Media

Donate Janashakthi Media

Leave a Reply

Your email address will not be published. Required fields are marked *