ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ನಿಂದ ರಾಜಭವನ ಚಲೋ

ಬೆಂಗಳೂರು ಜ 20 : ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ, ಕೇಂದ್ರ ಸರ್ಕಾರಗಳ ನೀತಿಗಳ ವಿರುದ್ಧ ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಳ್ಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಬೆಳಿಗ್ಗೆ.11 ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ  ನಡೆಸಿ ಪ್ರತಿಭಟನಾ ಸಮಾವೇಶ ನಡೆಸಲಾಯಿತು.

ನಿನ್ನೆ ರಾತ್ರಿಯಿಂದಲೇ ರಾಜ್ಯದ ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಬರುತ್ತಿದ್ದ ರೈತರು, ಕಾಂಗ್ರೆಸ್ ಕಾರ್ಯಕರ್ತರನ್ನು ಹೆದ್ದಾರಿಯಲ್ಲೇ  ಪೊಲೀಸರು ತಡೆ ಹಿಡಿದಿದ್ದರು. ಇದ್ಯಾವುದಕ್ಕೂ ಜಗ್ಗದೆ ಬೆಂಗಳೂರಿಗೆ ಬನ್ನಿ ಎಂದು ಡಿಕೆಶಿ ಕಾರ್ಯಕರ್ತಿರಿಗೆ ಕರೆ ನೀಡಿದ್ದರು, ಇದರಿಂದ ಸ್ಪೂರ್ತಿಗೊಂಡ ಕಾರ್ಯಕರ್ತರು 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಕಲಾಪ ಬಹಿಷ್ಕರಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

ನೂರಾರು ಟ್ರಾಕ್ಟರ್ ಗಳಲ್ಲಿ ಆಗಮಿಸಿದ ರೈತರು. ಡೊಳ್ಳು ಕುಣಿತ ಸೇರಿದಂತೆ ಜಾನಪದ ತಂಡಗಳಿಂದ ಪ್ರತಿಭಟನೆಗೆ ಮೆರಗು ಬಂದಿತ್ತು,  ತಲೆಗೆ ಹಸಿರು ಶಾಲು ತೊಟ್ಟ ಸಿದ್ದರಾಮಯ್ಯ, ಡಿಕೆಶಿ, ರಾಮಲಿಂಗ ರೆಡ್ಡಿ, ಎಂಬಿ ಪಾಟೀಲ್ ಗಮನ ಸೆಳೆದರು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕೃಷಿ ಕ್ಷೇತ್ರಕ್ಕೆ ಮಾರಕವಾದ ಕಾಯಿದೆಗಳನ್ನು ವಾಪಸ್ ಪಡೆಯದಿದ್ದರೆ ರೈತರು ದಂಗೆ ಏಳುವುದು ಖಚಿತ ಎಂದು ಎಚ್ಚರಿಕೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ಎಸ್‌ಆರ್‌ ಪಾಟೀಲ್, ದಿನೇಶ್ ಗುಂಡೂರಾವ್, ಜಿ. ಪರಮೇಶ್ವರ್‌ ಹಾಗೂ ಮತ್ತಿತರರು ಭಾಗಿಯಾಗಿದ್ದರು.

ರಾಜಭವನಕ್ಕೆ ಮುತ್ತಿಗೆ ಯತ್ನ : ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಸಮಾವೇಶದ ಬಳಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜಭವನ ಮುತ್ತಿಗೆ ಹಾಕಲು ಮುಂದಾದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ. ಮೊದಲ ಹಂತದ ಬ್ಯಾರಿಕೇಡ್‌ ದಾಟಿ ಮುಂದಕ್ಕೆ ಸಾಗಿದ ಕಾರ್ಯಕರ್ತರು ಹಾಗೂ ಮುಖಂಡರನ್ನು ಪೊಲೀಸರು ಬಳಿಕ ವಶಕ್ಕೆ ಪಡೆದುಕೊಂಡರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸಲೀಂ ಅಹಮ್ಮದ್ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

 

ಇದನ್ನೂ ಓದಿ : ಎಂಎಸ್​ಪಿ, ಕೇಂದ್ರ ಕೃಷಿ ಕಾಯ್ದೆ; ರೈತರ ಭಯ ಮತ್ತು ಹೋರಾಟ

ಹೋರಾಟದಲ್ಲಿ ಗಮನ ಸೆಳೆದ ಫೋಟೊಗಳು

Donate Janashakthi Media

Leave a Reply

Your email address will not be published. Required fields are marked *