ಚಾಮರಾಜನಗರ: ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಳಿಕ ಈಗ ಸ್ಥಳೀಯ ಮುಖಂಡರ ವಿರುದ್ಧವೂ ಪ್ರಕರಣಗಳು ದಾಖಲಾಗುತ್ತಿವೆ. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ 13 ಮಂದಿ ವಿರುದ್ಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಬಸ್, ಕಾರುಗಳಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ದಿದ್ದಾರೆಂದು ತೋಟೇಶ್, ರವಿ, ಅಕ್ಮಲ್ ಪಾಷಾ, ರಂಗಸ್ವಾಮಿ ಸೇರಿದಂತೆ 13 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿಪತ್ತು ನಿರ್ವಹಣಾ ಕಾಯ್ದೆಯಡಿ ಪಿಎಸ್ಐ ವೀರಣ್ಣಾರಾಧ್ಯ ದೂರು ನೀಡಿದ್ದು, ಕೇಸ್ ದಾಖಲಾಗಿದೆ. ನೆನ್ನೆ ಚಾಮರಾಜನಗರ ಜಿಲ್ಲೆಯಿಂದ 60ಕ್ಕೂ ಹೆಚ್ಚು ಬಸ್ಗಳಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು.