ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಸಮೀಪ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ರಾಹುಲ್
ಕಾಂಗ್ರೆಸ್ ನಾಯಕರು ಲೋಕ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸಿ ಧರಣಿ ಕುಳಿತರು. ನೀಟ್ ಪರೀಕ್ಷೆಯ ಅಕ್ರಮಗಳನ್ನು ವಿರೋಧಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬಲಪ್ರಯೋಗದಿಂದ ಹತ್ತಿಕ್ಕಲಾಗಿದೆ ಎಂದು ಆರೋಪಿಸಿದ ಅವರು, ಈ ಪ್ರಕರಣಕ್ಕೆ ರಾಜಕೀಯ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಗೂ ಮುನ್ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಪೊಲೀಸ್ ಕ್ರಮದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಪ್ರಧಾನಿ ನಿವಾಸದ ಎದುರು ಧರಣಿ ನಡೆಸಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸರ್ಕಾರ ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧವಾಗಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ‘ಘೋರ ಪಾಪ’; ಮೌನ ಮುರಿದ ಪ್ರಧಾನಿ ಮೋದಿ
ಪ್ರತಿಭಟನೆ ವೇಳೆ ಪ್ರಧಾನ ಮಂತ್ರಿ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸ್ಥಳಕ್ಕೆ ಆಗಮಿಸಿ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ ಕಾಂಗ್ರೆಸ್ ನಾಯಕರು ತಮ್ಮ ಬೇಡಿಕೆಗಳನ್ನು ಪುನರುಚ್ಚರಿಸಿ ಧರಣಿ ಮುಂದುವರಿಸಿದರು.
ಈ ಬೆಳವಣಿಗೆಗಳೊಂದಿಗೆ ನೀಟ್ ಪರೀಕ್ಷಾ ಅಕ್ರಮ, ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಅದರ ಮೇಲಿನ ಪೊಲೀಸ್ ಕ್ರಮ ರಾಷ್ಟ್ರ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದ್ದು, ಸಂಸತ್ತಿನಲ್ಲಿಯೂ ಪ್ರತಿಪಕ್ಷಗಳು ಈ ವಿಷಯವನ್ನು ತೀವ್ರವಾಗಿ ಪ್ರಸ್ತಾಪಿಸುತ್ತಿವೆ.
ಇದನ್ನೂ ನೋಡಿ : ಶೇ.33% ಮಹಿಳಾ ಮೀಸಲಾತಿ ತಕ್ಷಣ ಜಾರಿ ಮಾಡಿ! ಬೆಂಗಳೂರಿನಲ್ಲಿ ಮಹಿಳಾ ಸಂಘಟನೆಗಳ ಪ್ರತಿಭಟನೆ Janashakthi Media
