ಲೋಕಸಭೆ ಸ್ಪೀಕರ್ ಭಾಷಣಕ್ಕೆ ಕಾಂಗ್ರೆಸ್ ಬಹಿಷ್ಕಾರ

ಬೆಂಗಳೂರು : ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ ಅವರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಶುಕ್ರವಾರ ಮಾಡಲಿರುವ ಭಾಷಣವನ್ನು ಕಾಂಗ್ರೆಸ್‌ ಬಹಿಷ್ಕರಿಸಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಲೋಕಸಭಾಧ್ಯಕ್ಷರನ್ನು ಆಹ್ವಾನಿಸಿರುವುದು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು. ಹಾಗಾಗಿ ಈ ಕಾರ್ಯಕ್ರಮವನ್ನು ಕಾಂಗ್ರೆಸ್ ಶಾಸಕರು ಬಹಿಷ್ಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಮಾತ್ರ ಪಾಲ್ಗೊಳ್ಳಲು ನಿಯಮಾವಳಿಗಳಲ್ಲಿ ಅವಕಾಶವಿದೆ. ಲೋಕಸಭಾಧ್ಯಕ್ಷರ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಿ ಎಂದು ಹೇಳಿದ್ದೆವು. ಅವರು ಒಪ್ಪದೆ ಇದ್ದ ಕಾರಣ ಬಹಿಷ್ಕಾರ ಅನಿವಾರ್ಯವಾಗಿದೆ.

ಲೋಕಸಭಾದ್ಯಕ್ಷರನ್ನು ವಿಧಾನಮಂಡಲಕ್ಕೆ ಆಹ್ವಾನಿಸುವುದು ಒಂದು ಕೆಟ್ಟ ಸಂಪ್ರದಾಯವಾಗಿದೆ. ಈಗಲೂ ಕಾಲ ಮಿಂಚಿಲ್ಲ, ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ‌ ಕಾರ್ಯಕ್ರಮವನ್ನು ವಿಧಾನಮಂಡಲದಿಂದ ಬ್ಯಾಂಕ್ವೆಟ್ ಸಭಾಂಗಣಕ್ಕೆ ಸ್ಥಳಾಂತರಿಸಿ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಟಾಂಗಾ ಜಾಥಾ: ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಶುಕ್ರವಾರವೂ ಕಾಂಗ್ರೆಸ್‌ ಶಾಸಕರು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೂ ಕುದುರೆ ಗಾಡಿಯಲ್ಲಿ ಮೆರವಣಿಗೆಯಲ್ಲಿ ಬರಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *