ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವಿನ ಬಗ್ಗೆ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

Please follow and like us:
ಚಳ್ಳಕೆರೆ: ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವಿನ ಬಗ್ಗೆ  ವಿಶ್ವಾಸವಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಉಪಚುನಾವಣೆ

ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದ ಅವರು, ʼವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1,000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆʼ ಎಂದಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ: ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಇದನ್ನು ನೋಡಿ : ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ: BJP JDS ಸಂಭಾವ್ಯ ಅಭ್ಯರ್ಥಿಗಳಾರು?

Please follow and like us:
Donate Janashakthi Media

Leave a Reply

Your email address will not be published. Required fields are marked *