ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

Please follow and like us:
ಮೈಸೂರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ʼಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆʼ ಎಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್

ಸಿದ್ದರಾಮನಹುಂಡಿಯಲ್ಲಿ ಇಂದು ಮತ ಚಲಾಯಿಸಿರುವ ಅವರು ಪತ್ರಕರ್ತರ ಜೊತೆ ಮಾತನಾಡಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ಮೊದಲ ಹಂತದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಜನರು ಗ್ಯಾರಂಟಿ ಯೋಜನೆಗಳ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ : ಇಂದು ದೇಶದ ಭವಿಷ್ಯವನ್ನು ನಿರ್ಧರಿಸುವ ಐತಿಹಾಸಿಕ ಚುನಾವಣೆ, ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕಿ; ರಾಹುಲ್ ಗಾಂಧಿ

ಕಳೆದ ಮೂರು ದಿನಗಳ ಮೋದಿ ಭಾಷಣ ಹತಾಶೆ ಹಾಗೂ ಪ್ರಚೋದನಾಕಾರಿ ಆಗಿದೆ ಹೊರತು ಪರಿಣಾಮಕಾರಿ ಆಗಿಲ್ಲ ಎಂದರು. ದೇವೇಗೌಡರು ಹಾಗೂ ಅವರ ಕುಟುಂಬದವರ ಕಣ್ಣೀರು ಕೃತಕವಾದದ್ದು. ರಾಜಕಾರಣದ ವಿಚಾರದಲ್ಲಿ ಈ ರೀತಿ ಕಣ್ಣೀರು ಬರಬಾರದು ಎಂದರು.

ಎನ್ ಡಿಎ ಗೆಲ್ಲಲಿದೆ ಎಂದ ಸಿದ್ದರಾಮಯ್ಯ: ಮೊದಲ ಹಂತದ 102 ಕ್ಷೇತ್ರಗಳ ಪೈಕಿ ಎನ್ ಡಿಎ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಾಯಿ ತಪ್ಪಿ ಹೇಳುವ ಮೂಲಕ ಸಿದ್ದರಾಮಯ್ಯ ಗೊಂದಲ ಮೂಡಿಸಿದರು. ‘ ಮೋದಿ ಅವರಿಗೆ ತಾವು ಗೆಲ್ಲುವುದಿಲ್ಲ ಎಂದು ಗೊತ್ತಾಗಿದೆ. ಎನ್ ಡಿಎ ಮತ್ತು ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ’ ಎಂದರು.

ಇದನ್ನು ನೋಡಿ : ಪ್ರಧಾನಿ ಮೋದಿ ಭ್ರಷ್ಟಾಚಾರದ ಚಕ್ರವರ್ತಿ – ಕೆ. ವಿ.ನಾಗರಾಜ ಮೂರ್ತಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *