ರಾಜ್ಯದಲ್ಲಿ ಮೇಘಸ್ಪೋಟದಿಂದಾಗಿ ತೀಸ್ತಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು ರಕ್ಷಣಾಕಾರ್ಯಾಚರಣೆಗೆ ಸ್ಥಳೀಯ ಸರ್ಕಾರದ ಜೊತೆ ಕೈ ಜೋಡಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮನವಿ ಮಾಡಿದ್ದಾರೆ. ಸಿಕ್ಕಿಂ ಮೇಘಸ್ಪೋಟ
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಿಂ ಪ್ರವಾಹ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಅವರು ಪ್ರವಾಹದಲ್ಲಿ ಮೃತಪಟ್ಟಿವರಿಗೆ ಸಂತಾಪ ಸೂಚಿಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತರು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಹೇಳಿರುವ ಅವರು ಸೇನಾ ಸಿಬ್ಬಂದಿ ಸೇರಿದಂತೆ ನಾಪತ್ತೆಯಾಗಿರುವವರು ಜನರು ಪತ್ತೆಯಾಗುವಂತಾಗಲಿ ಎಂದು ತಿಳಿಸಿದ್ದಾರೆ. ಸಿಕ್ಕಿಂ ಮೇಘಸ್ಪೋಟ
ರಾಜ್ಯದಲ್ಲಿ ಸುಮಾರು 22 ಸಾವಿರ ಜನರು ತೊಂದರೆಗೀಡಾದ್ದಾರೆ. ಈವರೆಗೆ 2011 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸಿಕ್ಕಿಂ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!
ಸರ್ಕಾರವು 26 ಸ್ಥಳಗಳಲ್ಲಿ ಪರಿಹಾರ ಶಿಬಿರಗಳನ್ನು ತೆರೆದಿದೆ. ಗ್ಯಾಂಗ್ಟಕ್‌ನಲ್ಲೇ 8 ಶಿಬಿರಗಳನ್ನು ತೆರೆಯಲಾಗಿದ್ದು ಈಗಾಗಲೇ 1025 ಜನರು ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.
ವಿಡಿಯೋ ನೋಡಿ: ಒಂದು ದೇಶ ಒಂದು ಚುನಾವಣೆ : ದೇಶದ ಭದ್ರತೆಯನ್ನು ನಾಶ ಮಾಡುವ ಪ್ರಸ್ತಾಪ – ಎ ನಾರಾಯಣ Janashakthi Media