ಹಾಸನ: ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾನ್ಸ್ಟೇಬಲೊಬ್ಬ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು ಬಂದಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಮತ್ತು ಮಮತಾ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಕಳೆದ ಕೆಲವು ದಿನಗಳ ಹಿಂದೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಪತ್ನಿ ಬಂದಿದ್ದಾರೆ.
ಇದನ್ನು ಓದಿ : ಶ್ರೀರಾಮನಗರ ಖಾಸಗಿ ಶಾಲೆಯಿಂದ ಮಕ್ಕಳನ್ನು ಕರೆತರಲು ಅವಧಿ ಮೀರಿದ ವಾಹನ ಓಡಾಟ SFI ಖಂಡನೆ
ಇದನ್ನು ಗಮನಿಸಿದ ಪತಿ ಲೋಕನಾಥ್ ಆವರಣದಲ್ಲೇ ಮಮತಾಗೆ ಚೂರಿ ಇರಿದಿದ್ದಾನೆ. ಕೂಡಲೇ ಅಲ್ಲಿದ್ದವರು ಮಮತಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಮತಾ ಮೃತಪಟ್ಟಿದ್ದಾರೆ. ಆರೋಪಿ ಲೋಕನಾಥ್ನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಕಟ್ಟಡ ಕಾರ್ಮಿಕರ ಹಣಕ್ಕೆ ಕನ್ನ?! ಏನಾಗ್ತಿದೆ ಕಲ್ಯಾಣ ಮಂಡಳಿಯಲ್ಲಿ?!!Janashakthi Media