ಚಾಮರಾಜನಗರ: ನ.26ರಂದು ಸಂವಿಧಾನ ದಿನಾಚರಣೆ ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೋಮವಾರ ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ದತೆಗಳನ್ನು ಪರಿಶೀಲಿಸಿದರು.
ಸಂವಿಧಾನ ಜಾಗೃತಿ ಜಾಥಾ ನಡೆಸಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಅಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಭವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಬೇಕು, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂವಿಧಾನ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ : ತ್ಯಾಜ್ಯ ನಿರ್ವಹಣೆ ಸುಧಾರಿಸಲು 1,000 ಉಕ್ಕಿನ ಕಸ ಸಂಗ್ರಹ ತೊಟ್ಟಿ ಇಡಲು ಸಿದ್ಧತೆ
ಸಂವಿಧಾನ ಪೀಠಿಕೆ ವಾಚನ, ಡಾ.ಬಿ.ಆರ್.ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಮಕ್ಕಳಿಂದ ನೃತ್ಯ ರೂಪಕ, ಅಂಬೇಡ್ಕರ್ ವಿಚಾರಧಾರೆ, ಸಂವಿಧಾನದ ಆಶಯಗಳ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ವಿವಿಧ ಇಲಾಖೆಗಳು ಹೊಣೆಗಾರಿಕೆಯಿಂದ ಜವಾಬ್ದಾರಿ ನಿಭಾಯಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್.ಬಿಂದ್ಯಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಪಾಟೀಲ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಪುಟ್ಟಗೌರಮ್ಮ, ತಹಶೀಲ್ದಾರ್ ಗಿರಿಜಾ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಇದನ್ನೂ ನೋಡಿ : ದಣಿವರಿಯದೆ ದುಡಿಯುವ ಮಹಿಳೆಗೆ ಕನಿಷ್ಠ ಕೂಲಿ ಯಾಕಿಲ್ಲ? Janashakthi Media
