‘ಸಂವಿಧಾನ ಬರಿ ಪುಸ್ತಕವಲ್ಲ, ಬಡವರ ಧ್ವನಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆʼ; ರಾಹುಲ್ ಗಾಂಧಿ

ಚಂಡೀಗಢ: ‘ಸಂವಿಧಾನ ಬರಿ ಪುಸ್ತಕವಲ್ಲ, ಬಡವರ ಧ್ವನಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆʼ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಲೂಧಿಯಾನದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಸಂವಿಧಾನ ರಕ್ಷಣೆಯ ಚುನಾವಣೆ ಆಗಿದೆ ಎಂದು ಹೇಳಿದ್ದಾರೆ.

‘ಇದೇ ಮೊದಲ ಬಾರಿಗೆ ಪಕ್ಷವೊಂದು ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ರದ್ದುಗೊಳಿಸುವುದಾಗಿ ಹೇಳುತ್ತಿದೆ. ಆದರೆ ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ಹೋರಾಡಲಿದೆ’ ಎಂದು ಹೇಳಿದ್ದಾರೆ. ಸಂವಿಧಾನದ ಪ್ರತಿಯನ್ನು ಹಿಡಿದು ಮಾತನಾಡಿದ ಅವರು ‘ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ’ ಎಂದು ಹೇಳಿದ್ದಾರೆ.

ಇದನ್ನು ಓದಿ : ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ’ ಯೋಜನೆಯನ್ನು ರದ್ದುಗೊಳಿಸಿ ಕಸದ ಬುಟ್ಟಿಗೆ ಎಸೆಯುವುದಾಗಿ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ‘ರೈತರು ತೊಂದರೆ ಎದುರಿಸುತ್ತಿದ್ದು, ಬಿಜೆಪಿ ಸರ್ಕಾರ ಎಂಎಸ್‌ಪಿಗೆ ಕಾನೂನು ಖಾತ್ರಿ ನೀಡುತ್ತಿಲ್ಲ.

ಆದರೆ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಂಎಸ್‌ಪಿಗೆ ಕಾನೂನು ಖಾತ್ರಿ, ರೈತರ ಸಾಲ ಮನ್ನಾ ಹಾಗಾ ಮಹಾಲಕ್ಷ್ಮಿ ಯೋಜನೆ ಜಾರಿಗೊಳಿಸುವುದಾಗಿ’ ಭರವಸೆ ನೀಡಿದ್ದಾರೆ. ‘ಪಂಜಾಬ್‌ನಲ್ಲಿ ಡ್ರಗ್ಸ್ ಸಮಸ್ಯೆ ಹೆಚ್ಚುತ್ತಿದೆ. ಈ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನು ನೋಡಿ : ಏನಿದು ಸಿದ್ರಾಮಯ್ಯನವರೆ ಅನ್ಯಾಯದ ಕಡೆ ವಾಲುತ್ತಿದ್ದೀರಿ!?Janashakthi Media

Donate Janashakthi Media

Leave a Reply

Your email address will not be published. Required fields are marked *