ರಾಜ್ಯಗಳು ಒಕ್ಕೂಟ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಅಡೆತಡೆ ಎದುರಿಸುತ್ತಿವೆ: ಪಿಣರಾಯಿ ವಿಜಯನ್‌

ತಿರುವನಂತಪುರಂ: ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳ ಮೇಲೆ ಗಂಭೀರವಾದ ದಾಳಿಗಳು ಎದುರಾಗುತ್ತಿವೆ. ರಾಜ್ಯಗಳು ನಿಜವಾದ ಒಕ್ಕೂಟ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಕೇರಳ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

1949ರಲ್ಲಿ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಇಂದು ನಡೆಸಲಾದ ಸಂವಿಧಾನ ದಿನ ಆಚರಣೆಯ ಸಂದೇಶದಲ್ಲಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿದ್ದಾರೆ.

ದೇಶದ ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರಗಳು ದೇಶದ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾನ ಪಾತ್ರ ವಹಿಸಬೇಕು ಎಂಬ ಮೂಲಭೂತ ಪ್ರಜಾಸತ್ತಾತ್ಮಕ ತತ್ವವನ್ನು ಮರೆಯಲಾಗುತ್ತಿದೆ ಕಳವಳ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಾಮ್ರಾಜ್ಯಶಾಹಿ-ವಿರೋಧಿ ಹೋರಾಟದ ಆದರ್ಶಗಳನ್ನು ಒಳಗೊಂಡಿರುವ ಭಾರತದ ಸಂವಿಧಾನವು ಅದರ 73ನೇ ವಾರ್ಷಿಕೋತ್ಸವದಲ್ಲಿ ವ್ಯಾಪಕವಾದ ಸವಾಲುಗಳನ್ನು ಎದುರಿಸುತ್ತಿದೆ. ಅಂತಹ ಅಪಾಯಗಳನ್ನು ಹಿಮ್ಮೆಟ್ಟಿಸಲು ಮತ್ತು ಸಂವಿಧಾನದ ಆತ್ಮ ಮತ್ತು ಮೌಲ್ಯಗಳನ್ನು ರಕ್ಷಿಸಲು ಹೋರಾಡುವ ಸಮಯ ಇದು” ವಿಜಯನ್ ಹೇಳಿದ್ದಾರೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಿಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಮತ್ತು ಜಾತ್ಯತೀತತೆಯ ಸಾಂವಿಧಾನಿಕ ತತ್ವಗಳನ್ನು ಬುಡಮೇಲು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವೆ ನಡೆಯುತ್ತಿರುವ ಜಗಳದ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಚುನಾಯಿತ ಸರ್ಕಾರಗಳ ಮೇಲೆ ಒತ್ತಡ ಹೇರಲು ಉನ್ನತ ಸಾಂವಿಧಾನಿಕ ಸ್ಥಾನಗಳನ್ನು ಹೊಂದಿರುವವರನ್ನು ಸಹ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎದುರಾಗುತ್ತಿರುವ ಸವಾಲುಗಳನ್ನು ಪ್ರತಿರೋಧಿಸಿ ಕಾನೂನುಬದ್ಧವಾಗಿ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರತಿಭಟನೆಗಳ ಮೂಲಕ ಪ್ರಶ್ನಿಸಲಾಗುತ್ತಿದೆ ಮತ್ತು ಈ ಆಕ್ಷೇಪಣೆಯು ಸಂವಿಧಾನದ ರಕ್ಷಣೆಗೆ ಧ್ವನಿಯಾಗಿದೆ ಎಂದು ಪಿಣರಾಯಿ ವಿಜಯನ್‌ ಹೇಳಿದರು.

Donate Janashakthi Media

Leave a Reply

Your email address will not be published. Required fields are marked *