ರಾಜ್ಯದಾದ್ಯಂತ 1,652 ಕಿಮೀ ಹೊಸ ರೈಲು ಹಳಿ ನಿರ್ಮಾಣ: ಅಶ್ವಿನಿ ವೈಷ್ಣವ್

ಬೆಂಗಳೂರು:  ಸೋಮವಾರ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್,  2014 ರಿಂದ ಕರ್ನಾಟಕದಾದ್ಯಂತ 1,652 ಕಿಮೀ ಹೊಸ ರೈಲು ಹಳಿಗಳನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಇಡೀ ಶ್ರೀಲಂಕಾದ ರೈಲು ಮಾರ್ಗದ ವಿಸ್ತೀರ್ಣದಷ್ಟು ರೈಲ್ವೆ ಮಾರ್ಗ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ಅವಧಿಯಲ್ಲಿ ಆಗಿದೆ ಎಂದರು. ರಾಜ್ಯ

ಕೇಂದ್ರ ಬಜೆಟ್​ನಲ್ಲಿ ಕರ್ನಾಟಕ ರೈಲ್ವೆಗೆ ನೀಡಿರುವ ಕೊಡುಗೆಗಳ ಕುರಿತು ಮಾಹಿತಿ ನೀಡಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ 15 ಕಿಮೀ ಮಾತ್ರ ವಿದ್ಯುದ್ದಿಕರಣ​ ಕಾಮಗಾರಿ ನಡೆಯುತ್ತಿತ್ತು. ಈಗಿನ ಅವಧಿಯಲ್ಲಿ ಪ್ರತಿ ವರ್ಷ 300 ಕಿಮೀಗೂ ಹೆಚ್ಚು ವಿದ್ಯುದೀಕರಣ​ ಮಾಡಲಾಗುತ್ತಿದೆ. 2014ರ ನಂತರ ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲ್ವೆ ಮಾರ್ಗಗಳನ್ನು ಅಳವಡಿಸಲಾಗಿದೆ ಎಂದರು.

61 ರೈಲ್ವೆ ನಿಲ್ದಾಣಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಜೊತೆಗೆ, ಹೊಸ ಮಾರ್ಗಗಳು, ಡಬ್ಲಿಂಗ್, ಗೇಜ್ ಪರಿವರ್ತನೆ, ಕಾರ್ಯಾಗಾರಗಳ ಉನ್ನತೀಕರಣಕ್ಕಾಗಿ ಕರ್ನಾಟಕಕ್ಕೆ 51,479 ಕೋಟಿ ರೂ.ಹೂಡಿಕೆ ಬಂದಿದೆ. 10 ವಂದೇ ಭಾರತ್ ರೈಲುಗಳು ಕರ್ನಾಟಕದಲ್ಲಿ ಸಂಚರಿಸುತ್ತಿವೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದರು.

ಇದನ್ನೂ ಓದಿ: ಬಲವಂತದ ಭೂ ಸ್ವಾಧೀನ ವಿರೋಧಿಸಿ ಫೆ.10 ರಿಂದ ರೈತ-ಕೃಷಿಕೂಲಿಕಾರರ ಬೃಹತ್ ವಿಧಾನ ಸೌಧ ಚಲೋ-ಅನಿರ್ದಿಷ್ಟಾವಧಿ ಧರಣಿ

ಪ್ರಯಾಣಿಕರ ಸೌಕರ್ಯಗಳನ್ನು ಹೆಚ್ಚಿಸಲು, 61 ಲಿಫ್ಟ್‌ಗಳು ಮತ್ತು 43 ಎಸ್ಕಲೇಟರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು 335 ನಿಲ್ದಾಣಗಳಲ್ಲಿ ವೈ-ಫೈ ಒದಗಿಸಲಾಗಿದೆ. ರಾಜ್ಯವು ಪ್ರಸ್ತುತ 10 ವಂದೇ ಭಾರತಗಳನ್ನು ನಿರ್ವಹಿಸುತ್ತದೆ, 12 ಜಿಲ್ಲೆಗಳನ್ನು ಮತ್ತು ಕರ್ನಾಟಕದಾದ್ಯಂತ 18 ವಿಶಿಷ್ಟ ನಿಲುಗಡೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದರು.

ತುಮಕೂರು ನಿಲ್ದಾಣವನ್ನು 88 ಕೋಟಿ ರೂಪಾಯಿ ವೆಚ್ಚದಲ್ಲಿ ಮರುಅಭಿವೃದ್ಧಿಗೊಳಿಸಲಾಗುವುದು, ಮಾರ್ಚ್ 31 ರಂದು ಟೆಂಡರ್ ಅಂತಿಮಗೊಳ್ಳಲಿದೆ. ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳು ಸಹ 367 ಕೋಟಿ ರೂಪಾಯಿ ಮತ್ತು 485 ಕೋಟಿ ರೂಪಾಯಿಗಳಲ್ಲಿ ಮರು ಅಭಿವೃದ್ಧಿಗೆ ಒಳಪಡುತ್ತಿವೆ ಎಂದು ಮಾಹಿತಿ ನೀಡಿದರು. ಯುಪಿಎ ಸರಕಾರದ ಅವಧಿಯಲ್ಲಿ ಪ್ರತಿ ವರ್ಷ 372 ಕೋಟಿ ರೂ.ಗಳು ಸಿಗುತ್ತಿತ್ತು. 35 ರೈಲ್ವೆ ನಿಲ್ದಾಣಗಳನ್ನು ಅಮೃತ್ ಯೋಜನೆಯಡಿ ಪುನರ್ ಅಭಿವೃದ್ಧಿಗೊಳಿಸಲಾಗಿದೆ. ಎರಡು ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ ಎಂದು ಅವರು ಹೇಳಿದರು.

ಬಜೆಟ್‌ನಲ್ಲಿ ಕೇರಳಕ್ಕೆ 3,042 ಕೋಟಿ ರೂ., ತಮಿಳುನಾಡಿಗೆ 6,626 ಕೋಟಿ ರೂ. ಮತ್ತು ಗೋವಾ (ಕೊಂಕಣ ರೈಲ್ವೆ) 482 ಕೋಟಿ ರೂ. ಅನುದಾನ ನೀಡಲಾಗಿದೆ. “ಈ ಎಲ್ಲಾ ರಾಜ್ಯಗಳಿಗೆ ಹಿಂದಿನ ಯುಪಿಎ ಆಡಳಿತದಲ್ಲಿ ನೀಡಿದ್ದಕ್ಕಿಂತ ಹೆಚ್ಚು ಹಂಚಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗೆಂದು 7,564 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಯುಪಿಎ ಸರ್ಕಾರದ ಅವಧಿಯ ಕೊನೇ ವರ್ಷದಲ್ಲಿ ನೀಡಿದ ಅನುದಾನಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಶೇಕಡಾ ರೈಲ್ವೆಗೆ ಅನುದಾನ ಶೇಕಡಾ 9 ಪಟ್ಟು ಅಧಿಕವಾಗಿ ಸಿಕ್ಕಿದೆ.

ಇದನ್ನೂ ನೋಡಿ: ಬಹುರೂಪಿ | ಆದಿವಾಸಿ ಸಮುದಾಯದ ವರ್ತಮಾನದ ತಲ್ಲಣಗಳು Janashakthi Media

Donate Janashakthi Media

Leave a Reply

Your email address will not be published. Required fields are marked *