ತುಮಕೂರು: ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಶ್ರಾವಣ ಶನಿವಾರದ ಹಿನ್ನೆಲೆ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ವಾಂತಿ ಭೇದಿಯಿಂದ ಮೂವರು ಸಾನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಗ್ರಾಮಸ್ಥರೆಲ್ಲರೂ ಪಾಲ್ಗೊಳ್ಳುವುದರಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಹನ್ನೊಂದಕ್ಕೂ ಹೆಚ್ಚು ಜನ ಈ ಪ್ರಸಾದವನ್ನು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಮೂರು ಜನರಿಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಗ್ರಾಮದ 40 ವರ್ಷದ ತಿಪ್ಪಮ್ಮ, 85 ವರ್ಷದ ತಿಮ್ಮಕ್ಕ, 75 ವರ್ಷದ ಗಿರಿಯಮ್ಮ ನಿಧನರಾದವರು.
ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಮುತ್ತರಾಯಸ್ವಾಮಿ, ಕರಿಯಮ್ಮ ಭೂತಪ್ಪ ದೇವರ ಆರತಿ ಉತ್ಸವ ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ ಭಾಗಿಯಾಗಿದ್ದವರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪ್ರಸಾದ ಸೇವಿಸಿದ ಹನ್ನೊದಕ್ಕೂ ಹೆಚ್ಚು ಜನರಿಗೆ ಕಳೆದ ರಾತ್ರಿ ವಾಂತಿ, ಭೇದಿ ಕಾಣಿಸಿಕೊಂಡಿದೆ.
ಇದನ್ನೂ ಓದಿ: ಉಕ್ರೇನ್ ಮೇಲೆ 100 ಡ್ರೋಣ್, 100 ಕ್ಷಿಪಣಿ ದಾಳಿ ನಡೆಸಿದ ರಷ್ಯಾ: 5 ಸಾವು
ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಸೇವಿಸಿದ ಪ್ರಸಾದದಿಂದಲೇ ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಗ್ರಾಮಕ್ಕೆ ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ಮೇಲ್ನೋಟಕ್ಕೆ ಇದು ಫುಡ್ ಪಾಯಿಸನ್ ನಿಂದಾಗಿ ಎಂದಿದ್ದಾರೆ. ಪ್ರಸಾದದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಸಿಲಾಗಿದೆ. ಅದರ ವರದಿಗಾಗಿ ಬರಬೇಕಿದೆ.
ಇದನ್ನೂ ನೋಡಿ: ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ ಚಳವಳಿಯ ಪಾತ್ರ – ಜಾನಕಿ ನಾಯರ್ Janashakthi Media