ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಶೇಕಡಾ 50ರಷ್ಟು ಪ್ರಕರಣಗಳು ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ ಶೇ11 ರಷ್ಟು ಕೇಸ್ಗಳಿವೆ. ಡ್ರಗ್ಸ್ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು ಈ ಟಾಸ್ಕ್ ಫೋರ್ಸ್ನ ಸದಸ್ಯರಾಗಿರುತ್ತಾರೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೇಳಿದರು. ಮಾರಾಟ
ಡ್ರಗ್ಸ್ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು. ಮಾರಾಟ
ಇದನ್ನೂ ಓದಿ: ರಸ್ತೆ ಬಿಟ್ಟು ಕೆಳಗೆ ನುಗ್ಗಿದ ಶಾಲಾ ಬಸ್
ಡ್ರಗ್ಸ್ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್ ಕೇಸ್ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ ಆಗಲಿದೆ ಎಂದು ಹೇಳಿದರು.
ಡ್ರಗ್ಸ್ ಹಾವಳಿ ತಡೆಗಟ್ಟಲು ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ಇದೆ. ಇದಕ್ಕೆ ಹೆಚ್ ಸಿಜಿ ಆಸ್ಪತ್ರೆ ಕ್ಯಾನರ್ ತಜ್ಞ, ತಂಬಾಕು ನಿಯಂತ್ರಣ ಸಂಬಂಧಿತ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ವಿಶಾಲ್ ರಾವ್ ಸದಸ್ಯರರಾಗಿದ್ದಾರೆ. ಇವರ ಅಭಿಪ್ರಾಯವನ್ನೂ ತೆಗೆಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಪೂರ್ವದಲ್ಲಿ ಅತಿ ಡಗ್ಸ್ ಪೆಡ್ಲೆರ್ಸ್ ಇದ್ದಾರೆ. ಹೀಗಾಗಿ ಅಲ್ಲಿಂದ ಅತಿ ಹೆಚ್ಚು ಡ್ರಗ್ಸ್ ಸರಬರಾಜು ಆಗುತ್ತಿದೆ. ಡ್ರಗ್ಸ್ನಲ್ಲಿ ಸಿಂಥೆಟಿಕ್ ಬಂದಿದೆ. ಇದೆಲ್ಲ ಪೊಲೀಸ್ ಠಾಣೆಗಳಿಗೆ ಗೊತ್ತಿಲ್ಲದೆ ನಡೆಯುವುದಿಲ್ಲ. ಇವೆಲ್ಲದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದ್ದೇ ಇರುತ್ತೆ ಎಂದರು.
ಮೆಡಿಕಲ್ ಶಾಪ್ಗಳಲ್ಲೂ ಡ್ರಗ್ಸ್ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ಕೆಲ ಮೆಡಿಕಲ್ ಶಾಪ್ಗಳ ಲೈಸೆನ್ಸ್ ರದ್ದು ಮಾಡಿದ್ದೇವೆ. ಡ್ರಗ್ಸ್ ಇಲ್ಲ ಅಂತ ಹೇಳಲ್ಲ, ಕಡಿಮೆ ಮಾಡಬೇಕು ನಂತರ ತಡೆಗಟ್ಟಬೇಕು. 2023ರಲ್ಲಿ 123 ಅಂತರಾಷ್ಟ್ರೀಯ ಡ್ರಗ್ಸ್ ಸರಬರಾಜುದಾರರನ್ನು ಬಂಧಿಸಲಾಗಿದೆ. 2024ರಲ್ಲಿ 8,018 ಡ್ರಗ್ಸ್ ಸೇವನೆ ಮಾಡುವವರನ್ನು ಬಂಧಿಸಲಾಗಿದೆ. ಒಡಿಶಾ ಹಾಗೂ ಆಂಧ್ರ ಪ್ರದೇಶದಿಂದ ಡ್ರಗ್ಸ್ ಪೂರೈಕೆ ಆಗುತ್ತಿದೆ. ಮೊದಲು ಕಡಿಮೆ ಮಾಡಬೇಕು, ನಂತರ ಸಂಪೂರ್ಣ ನಿಲ್ಲಿಸಬೇಕು ಎಂದು ಹೇಳಿದರು.
ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಹೆಚ್ಚಳ
ಡ್ರಗ್ಸ್ ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದ್ದು, ಇದು ಸಮಾಜಕ್ಕೆ ಕಂಟಕ. ಡ್ರಗ್ಸ್ ತಡೆಗಟ್ಟಲು ಎನ್ಜಿಒಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ. ಡ್ರಗ್ಸ್ ತಡೆಗಟ್ಟಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಡ್ರಗ್ಸ್ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ನಶೆಯಲ್ಲಿ ಚಾಕು ಇರಿತದಿಂದ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ.
ಹೀಗಾಗಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಟಾಸ್ಕ್ಫೋರ್ಸ್ ರಚನೆ ಮಾಡಲು ನಿರ್ಧರಿಸಿದ್ದೇವೆ. NCC, ಸ್ಕೌಡ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸಿ, ಡ್ರಗ್ಸ್ ತಡೆಗಟ್ಟುವಲ್ಲಿ ಅವರು ಭಾಗಿಯಾಗುವಂತೆ ಮಾಡುತ್ತೇವೆ ಎಂದರು.
ಇದನ್ನೂ ನೋಡಿ: ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು – ಸಿದ್ದರಾಮಯ್ಯ