ಚೆನ್ನೈ: ನಕಲಿ ಮದ್ಯ ಸೇವಿಸಿ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 34ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 1,00 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಎಎನ್‌ಐ’ ಸುದ್ದಿಸಂಸ್ಥೆ ಈ ಕುರಿತು ವರದಿ ಮಾಡಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.
ಇದನ್ನು ಓದಿ : ಹಜ್ ಯಾತ್ರೆಯಲ್ಲಿ ಕನಿಷ್ಠ 550 ಪ್ರವಾಸಿಗರು ಮಕ್ಕಾದಲ್ಲಿ ತೀವ್ರ ಶಾಖದಿಂದ ಸಾವನ್ನಪ್ಪಿದ್ದಾರೆ: ವರದಿ
ನಕಲಿ ಮದ್ಯ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ‘ಕಲ್ಲಕುರಿಚಿ ದುರಂತ ಆಘಾತವನ್ನು ಉಂಟು ಮಾಡಿದೆ. ಆರೋಪಿಯನ್ನು ಬಂಧಿಸಲಾಗಿದೆ.
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ. ಅಲ್ಲದೆ ತನಿಖೆಗೆ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಗೋಕುಲ್‌ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿದೆ. ತಮಿಳುನಾಡು ರಾಜ್ಯಪಾಲ ಆರ್.ವಿ.ರವಿ ಸಹ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.
ಇದನ್ನು ನೋಡಿ : ಇರುವುದೊಂದೇ ಭೂಮಿ; ನಮಗಾಗಿ ಸಂರಕ್ಷಿಸೋಣ, ನೆಮ್ಮದಿಯಿಂದ ಬಾಳೋಣJanashakthi Media