ಬಿಸಿಯೂಟ ಸೇವನೆ ಶಾಲಾ ಮಕ್ಕಳು ಅಸ್ವಸ್ಥ

ಯಾದಗಿರಿ: ಬಿಸಿಯೂಟ ಸೇವಿಸಿದ್ದ ನೂರಕ್ಕೂ ಹೆಚ್ಚಿನ ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವುದು ವರದಿಯಾಗಿದೆ.

ಶಾಹಾಪೂರ ತಾಲೂಕಿನ ಉರ್ದು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೀರೆ ಅಗಸಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ರಾತ್ರಿವೇಳೆ ಅಸ್ವಸ್ಥಗೊಂಡ ಶಾಲಾಮಕ್ಕಳ ಸಂಖ್ಯೆ ನೂರಕ್ಕೂ ಹೆಚ್ಚಿನದಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣ : ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಬಿಸಿಯೂಟದಲ್ಲಿ ಕೊಟ್ಟ ಅನ್ನ ಸಾಂಬಾರ್ ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು ಮತ್ತೆ ಕೆಲವರಿಗೆ ಹೊಟ್ಟೆ ನೋವು. ಇನ್ನು ಕೆಲವರಿಗೆ ತಲೆಸುತ್ತು ಬಂದಿದೆ ಎಂದು ಹೇಳಲಾಗಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಗ್ರಾಮದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಊಟ ಮಾಡುವಾಗ ಕೆಲ ಮಕ್ಕಳ ಊಟದಲ್ಲಿ ಬಳೆ ಚೂರುಗಳು ಕಂಡುಬಂದಿವೆ ಎಂದು ಬಿಸಿಯೂಟ ಸೇವಿಸಿದ ಮಕ್ಕಳು ತಿಳಿಸಿದ್ದಾರೆ. ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಯಾದರಿ ಶಾಸಕ ಚನ್ನಾರೆಡ್ಡಿ ತುನ್ನೂರ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಾರೆಡ್ಡಿ ತುನ್ನೂರ, ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ನೋಡಿ: ಲೋಕಮತ 2024 | ಪಶ್ಚಿಮ ರಾಜ್ಯಗಳಲ್ಲೂ ಬಿಜೆಪಿಗೆ ಹಿನ್ನಡೆ Janashakthi Media

Donate Janashakthi Media

Leave a Reply

Your email address will not be published. Required fields are marked *