ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ. ಬಳಕೆ
ಇದನ್ನೂ ಓದಿ:ನೆಟೆ ರೋಗ ಸಂತ್ರಸ್ತರಿಗೆ 74 ಕೋಟಿ ರೂ. ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ
ಬುಧವಾರ ಸೆ-26 ರೈತ ಸಂಘಟನೆಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಲುವರಾಯಸ್ವಾಮಿ ಅವರು ಸಭೆ ನಡೆಸಿದರು. ಈ ವೇಳೆ ಅತ್ಯಾಧುನಿಕ ತಂತ್ರಜ್ಞಾನವನ್ನು ರೈತರು ಬಳಸಿಕೊಳ್ಳಬೇಕು. ಹೆಚ್ಚು ತಂತ್ರಜ್ಞಾನವನ್ನು ಬಳಸಿ, ಕಡಿಮೆ ನೀರನ್ನು ಬಳಸಿಕೊಂಡು ಬೆಳೆಗಳನ್ನು ಬೆಳೆಯಬಹುದು, ಹನಿ ನೀರಾವರಿ ಮತ್ತು ಕೃಷಿಗೆ ಕಡಿಮೆ ನೀರನ್ನು ಬಳಸಬೇಕು ಎಂದು ತಿಳಿಸಿದರು.
ರೈತರಿಗೆ ಸಹಾಯ ಮಾಡಲು ನ್ಯಾನೋ ಯೂರಿಯಾ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ರೈತರಿಗೂ ಲಭ್ಯವಾಗಲಿದೆ. ಕೃಷಿಯಲ್ಲಿ ಡ್ರೋಣ್ ತಂತ್ರಜ್ಞಾನವನ್ನು ಬಳಸಲು ರಾಜ್ಯ ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ ಎಂದರು.