ಹಾವೇರಿ: ಜೂನ್ 24 ಮಂಗಳವಾರದಂದು ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು| ಜೂನ್ 30ರವರೆಗೂ ಭಾರಿ ಮಳೆ; 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ ಠಾಣೆ ಪೊಲೀಸ್ರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಪುಸ್ತಕ ಬಿಡುಗಡೆ | ಆರದ ಹೋರಾಟದ ಕಿಚ್ಚು | ಪ್ರಬೀರ್ ಪುರಕಾಯಸ್ತ
