ʻಡೆಂಗ್ಯೂʼ ನಿಯಂತ್ರಿಸುವುದಕ್ಕೆ ಬೀದಿಗಿಳಿದು ಕೆಲಸ ಮಾಡಬೇಕು : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಜಿಲ್ಲಾಧಿಕಾರಿಗಳೆನೂ ಮಹಾರಾಜರಲ್ಲ, ʻಡೆಂಗ್ಯೂʼ ನಿಯಂತ್ರಿಸುವುದಕ್ಕೆ ಬೀದಿಗಿಳಿದು ಕೆಲಸ ಮಾಡಲಿಲ್ಲ ಏಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ್ದು, ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ.

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು ಎಂದರು.

ಇದನ್ನು ಓದಿ : ಬೆಂಗಳೂರಿನಲ್ಲಿ 2ನೇ ಶಂಕಿತ ಡೆಂಗ್ಯೂ ಸಾವು ವರದಿ; ಡಾ.ಸಿ.ಎನ್.ಮಂಜುನಾಥ್ ವೈದ್ಯಕೀಯ ತುರ್ತುಸ್ಥಿತಿಗೆ ಕರೆ

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು

ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು

ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು. ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನು ನೋಡಿ : ಡೆಂಗ್ಯೂ – ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವಿಕೆ | ಡಾ ಪೃಥ್ವಿ ಬಿ ಸಿ Janashakthi Media

 

Donate Janashakthi Media

Leave a Reply

Your email address will not be published. Required fields are marked *