ಕೊರೊನಾ ಸೋಂಕಿಗೆ ಬಲಿಯಾದ ಪೌರಕಾರ್ಮಿಕರಿಗೆ 50 ಲಕ್ಷ ರೂ. ಪರಿಹಾರ ನೀಡಿ : ಎಚ್ ಡಿಕೆ

 

ಬೆಂಗಳೂರು :  ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ಪೌರಕಾರ್ಮಿಕ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ.

ಸರಣಿ ಟ್ವಿಟ್ ಮಾಡಿರುವ ಅವರು ಕೊರೊನಾ ಸಂಕಷ್ಟದ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಕರ್ತವ್ಯ ನಿರ್ವಹಿಸಿದ ಪೌರಕಾರ್ಮಿಕರು ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ. ಅವರ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜವಾದ ಗೌರವವಾಗುತ್ತದೆ ಎಂದಿದ್ದಾರೆ.

ಕರ್ತವ್ಯ ನಿರತ ಪೌರಕಾರ್ಮಿಕರು  ಕೊರೊನಾ ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50ಲಕ್ಷ ರೂ ಪರಿಹಾರವನ್ನು ನೀಡಬೇಕೆಂದು ಅವರು  ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *