ಕೊರೊನಾದಿಂದ ಸಾವಿಗೀಡಾದವರ ಬಗ್ಗೆ ನಿಖರ ಲೆಕ್ಕ ನೀಡದ ಸರಕಾರ: ಸಿದ್ದರಾಮಯ್ಯ

ಬೆಂಗಳೂರು: ಸರಕಾರ ಕೊರೊನಾದಿಂದ ಸಾವಿಗೀಡಾಗುವ ಜನರ ಬಗ್ಗೆ ಸರಕಾರ ರಾಜ್ಯಕ್ಕೆ ಜನರಿಗೆ ಸರಿಯಾದ ಲೆಕ್ಕವನ್ನು ನೀಡದೆ ಮುಚ್ಚಿಟ್ಟುಕೊಂಡು ಜನರಿಗೆ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು ರಾಜ್ಯ ಸರಕಾರ ಹಾಗೂ ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಹಾಗೂ ರಾಜ್ಯದ ಬಿಜೆಪಿ ಸರಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಪರಿಸ್ಥಿತಿ ಬರುತ್ತಿರಲಿಲ್ಲ. ಎಂದಿದ್ದಾರೆ.

ಇದನ್ನು ಓದಿ: ಸರಕಾರ ನಡೆಸುವ ಯಜಮಾನ ಹಿಡಿತ ಕಳೆದುಕೊಂಡಿದ್ದಾನೆ – ಎಚ್ ವಿಶ್ವನಾಥ್

ಅಲ್ಲದೆ, ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಬಡ ರೈತನೊಬ್ಬನಿಗೆ “ಹೊಟ್ಟೆಗಿಲ್ಲದಿದ್ದರೆ ಸಾಯೋದೆ ಒಳ್ಳೆಯದು” ಎಂಬ ಉಡಾಫೆ ಉತ್ತರ ನೀಡಿರುವ ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್ ಎಂದಿರುವ ಅವರು, ಉಮೇಶ್‌ ಕತ್ತಿ ಪರವಾಗಿ ವಿಷಾದ ವ್ಯಕ್ತಪಡಿಸುವ ಬದಲು ಬಿಜೆಪಿಯು  ಮಂತ್ರಿಮಂಡಲದಿಂದ ಕೈಬಿಡಬೇಕಾಗಿತ್ತು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಕರ್ಫ್ಯೂ ಅವಧಿಯಲ್ಲಿ ಕಾರ್ಮಿಕರ ಸಂಬಳ ಕಡಿತ ಮಾಡದಂತೆ ಕೋರಿ ಪಿಐಎಲ್‌

ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯದ ಬಿಜೆಪಿ ಸರಕಾರ ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *