ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ವಾರದಿಂದ ನಿರಂತರವಾಗಿ ಹೆಚ್ಚಾಗುತ್ತಲೆ ಇದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,15,736 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 630 ಮಂದಿ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಈವರೆಗೂ ಒಟ್ಟು ಸಕ್ರಿಯ ಪ್ರಕರಣಗಳು 8,43,473 ಏರಿಕೆಯಾಗಿದೆ. ಒಂದೇ ದಿನ 59,856 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,28,01,785ಕ್ಕೆ ಹೆಚ್ಚಳವಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 59,856 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 1,17,92,135ಕ್ಕೆ ತಲುಪಿದೆ.
ಇದನ್ನೂ ಓದಿ : ಕೋವಿಡ್ -19 : ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಪ್ರಕರಣ
ಇನ್ನು ಭಾರತದಲ್ಲಿ ಒಂದೇ ದಿನ 12,08,329 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,14,39,598 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆ ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.
ಇದನ್ನೂ ಓದಿ : ಎಸ್ಮಾ ಎಂದರೇನು? ಜಾರಿಯಾದ್ರೆ ಏನಾಗುತ್ತೆ??
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 8,70,77,474 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಲಯ ಮಾಹಿತಿ ನೀಡಿದೆ.