ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ಚಂದ್ರಯಾನ 3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ಸೂರ್ಯನ ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, ಆದಿತ್ಯ-ಎಲ್1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಇದನ್ನೂ ಓದಿ:ಆದಿತ್ಯಾ ಎಲ್ -1 ಉಡಾವಣಾ ಪೂರ್ವಾಭ್ಯಾಸ ಪರೀಕ್ಷೆ ಪೂರ್ಣ : ಇಸ್ರೋ ಮಾಹಿತಿ
ಸೂರ್ಯಯಾನ ಉಡಾವಣೆಯು ಶನಿವಾರ ಅಂದರೆ ಇಂದು ಬೆಳಗ್ಗೆ 11.50ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದ ಲಾಂಚ್ ಪ್ಯಾಡ್ನಿಂದ ನಿಗದಿಯಾಗಿದೆ. ಉಡಾವಣಾ ಪೂರ್ವಾಭ್ಯಾಸ ಮತ್ತು ವಾಹನದ ಆಂತರಿಕ ತಪಾಸಣೆ ಎಲ್ಲವೂ ಪೂರ್ಣಗೊಂಡಿದೆ.