ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಂಚೆಮತಗಳ ಎಣಿಕೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ ಎಂಟರಿಂದ ಅಂಚೆ ಮತಎಣಿಕೆ ಆರಂಭವಾಗಿದ್ದು, ಒಟ್ಟು ಎಂಟು ಟೇಬಲ್‌ಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಮೇ 30ರ ವರೆಗೂ 6,251 ಅಂಚೆ ಮತಗಳು ದಾಖಲಾಗಿವೆ. ಉತ್ತರ 

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ಶುರುವಾಗಿದ್ದು. ಸದ್ಯ 17 ಕ್ಷೇತ್ರಗಳ ಪೈಕಿ ಬಿಜೆಪಿ 11, ಕಾಂಗ್ರೆಸ್ 4 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: ‘ಬಂಡವಾಳ’ ಮಾರ್ಕ್ಸ್‌ವಾದಿ ಸಿದ್ಧಾಂತದ ಬ್ರಹ್ಮಾಸ್ತ್ರ

ಮಂಡ್ಯದಲ್ಲಿ ಜೆಡಿಎಸ್‍ನ ಹೆಚ್.ಡಿ.ಕುಮಾರಸ್ವಾಮಿ 108 ಮತಗಳ ಮುನ್ನಡೆ ಪಡೆದಿದ್ದರೆ, ಕೋಲಾರದಲ್ಲಿ ಮಲ್ಲೇಶ್ ಬಾಬು 560 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತುಮಕೂರಿನಲ್ಲಿ ಬಿಜೆಪಿಯ ವಿ.ಸೋಮಣ್ಣ, ಚಿಕ್ಕೋಡಿಯಲ್ಲಿ ಕಾಂಗ್ರೆಸ್‍ನ ಪ್ರಿಯಾಂಕಾ ಜಾರಕಿಹೊಳಿ, ದಾವಣರೆಗೆಯಲ್ಲಿ ಕಾಂಗ್ರೆಸ್‍ನ ಪ್ರಭಾ ಮಲ್ಲಿಕಾರ್ಜುನ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್, ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್, ಶಿವಮೊಗ್ಗದಲ್ಲಿ ಬಿಜೆಪಿಯ ರಾಘವೇಂದ್ರ, ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇದನ್ನೂ ನೋಡಿ: ಅಮ್ಮ ಎಂಬ ಭಾವಕ್ಕಿರುವ ಕಸುವು ಅನುಭವಿಸಿಯೇ ಅರಿಯಬೇಕು – ಪ್ರತಾಪ್ ಸಿಂಹJanashakthi Media

Donate Janashakthi Media

Leave a Reply

Your email address will not be published. Required fields are marked *