ದಾವಣಗೆರೆ : ವಿದ್ಯುತ್ ಶಾಕ್‌ ತಗುಲಿ ದಂಪತಿ ಮೃತ

Please follow and like us:
ದಾವಣಗೆರೆ: ವಿದ್ಯುತ್ ಶಾಕ್‌ ತಗುಲಿ ದಂಪತಿ ಮೃತಪಟ್ಟ ಘಟನೆ ತಾಲೂಕಿನ ಕಾಟೆಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಒಂದೂವರೆ ಎಕರೆ ನೀರಾವರಿ ಜಮೀನಿನಲ್ಲಿ ಟೊಮೊಟೊ, ಕೋಸ್ ಬೆಳೆದಿದ್ದರು. ಲತಾ (30), ನಾಗರಾಜ್(35) ಗುರುವಾರ ಬೆಳಗ್ಗೆ ಎಂದಿನಂತೆ ಜಮೀನಿಗೆ ತೆರಳಿದ್ದರು.

ಇದನ್ನು ಓದಿ : ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್: ಗೇಟ್ ಅಳವಡಿಕೆ ಕಾರ್ಯ ಚುರುಕು

ಕಳೆದ ರಾತ್ರಿ ಧಾರಾಕಾರವಾಗಿ ಮಳೆ ಸುರಿದು, ಜಮೀನಿನಲ್ಲಿ ನೀರು ನಿಂತಿತ್ತು. ಟಿಸಿ ಹಾಕಿದ್ದ ವಿದ್ಯುತ್‌ ಕಂಬಗಳ ತಂತಿ ಬಳಿ ಹೋಗಿ ಮುಟ್ಟಿದ್ದರಿಂದ ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಮೃತ ದಂಪತಿಗೆ 3ನೇ ತರಗತಿ ಓದುತ್ತಿರುವ ಸಾನ್ನಿ, ಯುಕೆಜಿ ಓದುತ್ತಿರುವ ಖುಷಿ ಎಂಬ ಇಬ್ಬರು ಪುತ್ರಿಯರಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಶಾಸಕ ಕೆ.ಎಸ್‌.ಬಸವಂತಪ್ಪ, ಬೆಸ್ಕಾಂ ಮತ್ತು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ನೆರವಾದರು. ಇದೇ ಸಂದರ್ಭದಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಮೃತದಂಪತಿಯ ಮಕ್ಕಳಿಗೆ ಪರಿಹಾರ ನೀಡಲು ಸೂಚನೆ ನೀಡಿದರು. 

Please follow and like us:
Donate Janashakthi Media

Leave a Reply

Your email address will not be published. Required fields are marked *