ಸಿಎಂ ಸ್ಥಾನದಿಂದ ಕೇಜ್ರಿವಾಲ್‌ರನ್ನು ಕಿತ್ತು ಹಾಕಲು ನಾವು ಯಾರು? ದಿಲ್ಲಿ ಹೈಕೋರ್ಟ್ ಪ್ರಶ್ನೆ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರನ್ನು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ವಜಾ ಮಾಡಿದೆ. ದಿಲ್ಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರು ಈ ನಿರ್ಧಾರ ಕೈಗೊಂಡಿದ್ದು, ವಿಚಾರವಾಗಿ ಪ್ರಜಾಪ್ರಭುತ್ವೇ ತೀರ್ಮಾನಿಸಲಿ ಎಂದು ತೀರ್ಪು ನೀಡಿದ್ದಾರೆ. ಸಿಎಂ 

ಒಂದು ವಾರದ ಹಿಂದೆ, ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ಕಾರಣ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲಾಗಿತ್ತು. ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಪಿಐಎಲ್ ಸಲ್ಲಿಸಿದ್ದರು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಗುಪ್ತಾ ಅವರ ಅರ್ಜಿಯನ್ನು ವಜಾಗೊಳಿಸಿತು. ಕೆಲವು ಸಂದರ್ಭಗಳಲ್ಲಿ ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯವಾಗಿರಬೇಕು. ನ್ಯಾಯಾಲಯವಾಗಿ ನಾವು ಕಾನೂನಿನ ಚೌಕಟ್ಟಿನೊಳಗೆ ಹೋಗಬೇಕು. ನೀವು ಹೇಳಿದಂತೆ ಪರಿಹಾರ ಒದಗಿಸಲು ಸಾಧ್ಯವಿಲ್ಲ. ಹೀಗಾಗಿ, ನೀವು ಕಾನೂನಿನ ಚೌಕಟ್ಟಿನೊಳಗೆ ಸೂಕ್ತವಾದ ಕಾನೂನು ಪ್ರಾಧಿಕಾರ ಅಥವಾ ವೇದಿಕೆಯ ಮುಂದೆ ಹೋಗಬೇಕು ಎಂದು ನಿರ್ದೇಶಿಸಿದೆ.

ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿರುವುದಾಗಿ ಪೀಠವು ಹೇಳಿದೆ ಮತ್ತು ಹೀಗಾಗಿ, ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದೆ.

ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ನಿರಾಕರಿಸಿದ್ದರಿಂದ, ಅರ್ಜಿದಾರ ವಿಷ್ಣು ಗುಪ್ತಾ ಅವರ ಪರ ವಕೀಲರು, ಅರ್ಜಿಯನ್ನು ಹಿಂಪಡೆಯಲು ಸೂಚನೆ ನೀಡಲಾಗಿದ್ದು, ಅವರು ತಮ್ಮ ಮನವಿಯೊಂದಿಗೆ ಲೆಫ್ಟಿನೆಂಟ್ ಗವರ್ನರ್ ಅವರನ್ನು ಸಂಪರ್ಕಿಸುವುದಾಗಿ ಹೇಳಿದರು. ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಅವಕಾಶ ನೀಡಿರುವ ನ್ಯಾಯಾಲಯ, ಅರ್ಜಿಯನ್ನು ವಿಲೇವಾರಿ ಮಾಡಿದೆ.

 

Donate Janashakthi Media

Leave a Reply

Your email address will not be published. Required fields are marked *