ಬೆಂಗಳೂರು,ಫೆ.19 : ಕೋವಿಡ್ ಮೃತಪಟ್ಟ ನೌಕರರ ಕುಟುಂಬಕ್ಕೆ ವಿಮಾ ಪರಿಹಾರ ಪಾವತಿಸುವಂತೆ ಒತ್ತಾಯಿಸಿ ಒತ್ತಾಯಿಸಿ ಬಿಬಿಎಂಪಿ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಿ ಗುರುವಾರದಂದು ಪ್ರತಿಭಟನೆ ನಡೆಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂರು ಸಾವಿರಕ್ಕೂ ಹೆಚ್ಚ ನೌಕರರು ಬಿಬಿಎಂಪಿ ಕೇಂದ್ರ ಕಚೇರಿಯ ಎದುರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದ 18 ಬಿಬಿಎಂಪಿ ನೌಕಕರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ವಿಮಾ ಪರಿಹಾರ ತಲುಪಿಸಿಲ್ಲ.
ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದ ವೇಳೆಯಲ್ಲಿ ಪ್ರಾಣದ ಹಂಗು ತೊರೆದು ನೌಕರರು ಕರ್ತವ್ಯ ನಿರ್ವಹಿಸಿದ್ದರು. ಕರ್ತವ್ಯ ವೇಳೆ ಸೋಂಕಿಗೆ ಸಿಲುಕಿ ಅಕಾಲಿಕ ಮರಣ ಹೊಂದಿದ್ದಾರೆ. ಅವರ ಕುಟುಂಬದ ರಕ್ಷಣೆಗೆ ಸರ್ಕಾರ ಸ್ಪಂದಿಸಬೇಕು, ಆದರೆ ಈ ವರೆಗೆ ಅವರ ಕುಟುಂಬಗಳಿಗೆ 30 ಲಕ್ಷ ರೂ ವಿಮಾ ಪರಿಹಾರ ನೀಡಿಲ್ಲ. ಪರಿಹಾರ ನೀಡದೇ ಸರ್ಕಾರ ಅವರ ಕುಟುಂಬಕ್ಕೆ ಅನ್ಯಾಯ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು ಮಹಾನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಗಳೆ ಹೊಂದಿದ್ದ, ಒಮ್ಮೆಯೂ ಬಿಬಿಎಂಪಿ ನೌಕರರ ಕುಂದು ಕೊರತೆಗಳನ್ನು ಆಲಿಸಿಲ್ಲ. ಮೃತಪಟ್ಟ ಕುಟುಂಬಕ್ಕೆ ಮನೋಸ್ಥೈರ್ಯ ತುಂಬಿಸುವ ಕೆಲಸ ಮಾಡಿಲ್ಲ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.