ಕೋವಿಡ್‌: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ: ಸಿಬಿಎಸ್‌ಇ 10ನೇ ತರಗತಿ ಬೋರ್ಡ್‌ ಪರೀಕ್ಷೆಗಳು ಹಾಗೂ 12ನೇ ತರಗತಿ ಪರೀಕ್ಷೆಗಳ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲು ಇಂದು ಉನ್ನತ ಮಟ್ಟದ ಸಭೆ ಸೇರಲಾಗಿತ್ತು.

ಸಿಬಿಎಸ್‌ಇ ಮಂಡಳಿಯು ರೂಪಿಸುವ ಕ್ರಮಗಳ (ವಸ್ತುನಿಷ್ಠ ಮಾನದಂಡ) ಆಧಾರ ಮೇಲೆ ಹತ್ತನೇ ತರಗತಿಯ ಫಲಿತಾಂಶವನ್ನು ಸಿದ್ಧಪಡಿಸಲಾಗುತ್ತದೆ. 12ನೇ ತರಗತಿ ಪರೀಕ್ಷೆಗಳನ್ನು ನಂತರ ನಡೆಸಲಾಗುತ್ತದೆ ಹಾಗೂ ಜೂನ್‌ 1ರಂದು ಮಂಡಳಿಯು ಪರಿಸ್ಥಿತಿ ಅವಲೋಕಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ಇದನ್ನು ಓದಿ : ಕೊವೀಡ್ -19 ಎರಡನೇ ಅಲೆಗೆ ‘ಸರಕಾರದ ನಿದ್ದೆ’ ಕಾರಣವಾಯ್ತಾ?

ಇಂಟನಲ್‌ ಅಸೆಸ್ಮೆಂಟ್‌ (ಆಂತರಿಕ ಮೌಲ್ಯಮಾಪನ) ಆಧಾರದ ಮೇಲೆ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ನೀಡಲಾಗುತ್ತದೆ. ವಿದ್ಯಾರ್ಥಿಗೆ ಅದು ತೃಪ್ತಿದಾಯಕವೆಂದು ತೋರದಿದ್ದರೆ ಪರೀಕ್ಷೆಗೆ ಹಾಜರಾಗಬಹುದು.

ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರದಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಹೇಳಿದ್ದಾರೆ.

ಪರೀಕ್ಷೆ ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಲಾಯಿತು. ಕೇಂದ್ರ ಶಿಕ್ಷಣ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಹಿಂದೆ ಮೇ ನಾಲ್ಕರಿಂದ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸಬೇಕೆಂದು ತೀರ್ಮಾನವಾಗಿತ್ತು.

ದೇಶದಾದ್ಯಂತ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ, ಚಿತ್ರನಟ ಸೋನು ಸೂದ್ ಸೇರಿದಂತೆ ಹಲವು ಸರ್ಕಾರಕ್ಕೆ ಒತ್ತಾಯಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *