ಕೋವಿಡ್‌ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆರೋಗ್ಯ ಇಲಾಖೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ.

ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈಮರೆಯದೆ ಹೆಚ್ಚುತ್ತಿರುವ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಬೂಸ್ಟರ್ ಡೋಸ್ ಕೊಡಬೇಕು ಹಾಗೂ ಯಾವುದೇ ರ‍್ಯಾಲಿಗಳಲ್ಲಿ ಕೊರೊನಾ ಸೋಂಕು ಹರಡಿದರೆ ಅದರ ಹೊಣೆಯನ್ನು ರ‍್ಯಾಲಿ ಆಯೋಜಿಸುವ ರಾಜಕೀಯ ಪಕ್ಷಗಳೇ ಹೊರಬೇಕು ಎಂದು ಎಚ್ಚರಿಸಲಾಗಿದೆ.

ಮತದಾನದ ದಿನ ಎಲ್ಲ ಮತಗಟ್ಟೆಗಳಲ್ಲಿ ಹೆಲ್ಪ ಡೆಸ್ಕ್ ಆರಂಭಿಸಬೇಕು, ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ : ಕೋವಿಡ್‌ ಪ್ರಕರಣ ಹೆಚ್ಚಳದ ಕುರಿತು ಗಮನ ವಹಿಸಿ : ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರದಿಂದ ಪತ್ರ!

ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು. ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *