ಕೋವಿಡ್ ಕಾಲದಲ್ಲಿ ಹಿರಿಯರಿಗೆ ಒದಗಿಸಿದ ಸೌಲಭ್ಯಗಳ ವರದಿ ಕೊಡಿ

  • ರಾಜ್ಯಗಳಿಗೆ ವರದಿ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಒದಗಿಸಿದ ಸೌಲಭ್ಯಗಳ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕೊರೊನಾ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ವೃದ್ಧರಿಗೆ ಸೌಲಭ್ಯಗಳನ್ನು ಕಲ್ಪಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂಬ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ವಿಸ್ತೃತ ವರದಿ ಸಲ್ಲಿಸಲು ನಾಲ್ಕು ವಾರಗಳ ಗಡುವು ವಿಧಿಸಿದೆ.

‘ಹಿರಿಯ ನಾಗರಿಕರಿಗೆ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ರಾಜ್ಯಗಳು ಕೇವಲ ವರದಿ ಸಲ್ಲಿಸಿವೆಯಷ್ಟೆ. ಇಷ್ಟು ಮಾತ್ರ ಸಾಕಾಗುವುದಿಲ್ಲ. ಕೊರೊನಾದ ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಕಲ್ಯಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಸೌಲಭ್ಯಗಳನ್ನು ಕಲ್ಪಿಸುವಂತೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರ, ಹಿರಿಯ ವಕೀಲ ಅಶ್ವನಿ ಕುಮಾರ್ ಮನವಿ ಮಾಡಿದ್ದರು.

Donate Janashakthi Media

Leave a Reply

Your email address will not be published. Required fields are marked *