ಕೋವಿಡ್‌ ಲಕ್ಷಣ ಕಂಡಲ್ಲಿ ವಿದ್ಯಾರ್ಥಿಗಳು ಮನೆಗೆ – ಶಿಕ್ಷಣ ಇಲಾಖೆ ಸೂಚನೆ

  • ಎರಡು ಶಾಲೆಯಲ್ಲಿ 31 ಮಕ್ಕಳಿಗೆ  ಕೋವಿಡ್
  • ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದಾಗ  ಮಕ್ಕಳಲ್ಲಿ ಕೋವಿಡ್‌ ಸೊಂಕು ಪತ್ತೆ

ಬೆಂಗಳೂರು: ಕೊರೋನ  ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸೂಚಿಸಿದೆ.

ರಾಜಧಾನಿಯಲ್ಲಿ ಕೆಲವು ದಿನಗಳಿಂದ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದು ತಿಳಿದುಬಂದಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಯಿತು. ಶಾಲಾ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರದ ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ತಿಳಿಸಿದರು.

ಬಿಬಿಎಂಪಿ ದಾಸರಹಳ್ಳಿ ವಲಯದ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿದ್ದು, ಶಾಲೆಗಳ ಎಲ್ಲಾ ಮಕ್ಕಳಿಗೆ ರಜೆ ನೀಡಲಾಗಿದೆ. ಒಟ್ಟು ಎರಡು ಶಾಲೆಯಲ್ಲಿ  31 ಮಕ್ಕಳಳಿಗೆ  ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ(ಯೋಜನೆ) ಎನ್‌.ಬಿ. ರವೀಂದ್ರ ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್‌ ಲಸಿಕೆ ಹಾಗೂ ಬೂಸ್ಟರ್‌ ಡೋಸ್‌ ತೆಗೆದುಕೊಂಡಿರಬೇಕು ಹಾಗೂ ಅದರ ಬಗ್ಗೆ ಶಾಲಾ ಮುಖ್ಯಸ್ಥರು ಮಾಹಿತಿ ಖಚಿತ ಪಡಿಸಿಕೊಳ್ಳಬೇಕು ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿಯವರು ಪೋಷಕರೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಬೇಕು.  ಕನಿಷ್ಠ ಒಂದು ತಿಂಗಳ ಮಟ್ಟಿಗೆ ಶಾಲೆಗಳಲ್ಲಿ ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆಗಳು ಆಗದಂತೆ  ನೋಡಿಕೊಳ್ಳುವುದು ಉತ್ತಮ ಎಂದು ಖಾಸಗಿ ಶಾಲೆಗಳು ಇದೇ ವೇಳೆ ಮನವಿ ಮಾಡಿದವು.

ಈ ಮಧ್ಯೆ ‘ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ’. ‘ಸ್ಥಳೀಯಮಟ್ಟದಲ್ಲಿ ಪ್ರಕರಣ ನಿಯಂತ್ರಣಕ್ಕೆ ಕ್ರಮ ಜರುಗುಂತೆ ನೋಡಕೊಳ್ಳಬೇಕು. ಜನರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು’  ಇದು ಎಲ್ಲಾ ಸಾರ್ವಜನಿಕರಿಗೆ ಆರೋಗ್ಯದ ಮೇಲೆ ಬೀಳುವ ಪರಿಣಾಮದಿಂದ ಉಪಯೋಗಕಾರಿ ಎಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮನವಿ ಮಾಡಿದರು.

Donate Janashakthi Media

Leave a Reply

Your email address will not be published. Required fields are marked *