ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಹೊಸ ಪ್ರಕರಣಗಳ ದಾಖಲಾತಿಯಲ್ಲಿ ತುಸು ಇಳಿಕೆ ಕಂಡಿದ್ದು ರಾಜ್ಯದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 35297 ಹೊಸ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, 344 ಮಂದಿ ಮರಣ ಹೊಂದಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ರಾಜ್ಯದಲ್ಲಿ 34,057 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇದನ್ನು ಓದಿ: ಕಠಿಣ ಕ್ರಮದಿಂದ ಕೋವಿಡ್ ನಿಯಂತ್ರಣ-ದೇವಿಶೆಟ್ಟಿ ನೇತೃತ್ವದ ಸಮಿತಿ ರಚನೆ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಇದುವರೆಗೆ ಒಟ್ಟಾರೆಯಾಗಿ 20,88,488 ಕೋವಿಡ್ ಪ್ರಕರಣಗಳು ದಾಖಲಾಗಿವೆ. 14,74,678 ಕೋವಿಡ್ ಸೋಂಕಿತರು ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ. 5,93,078 ಸೋಂಕಿತರ ಸಕ್ರಿಯ ಪ್ರಕರಣಗಳು ಅಂದರೆ ಶೇ.27.64ರಷ್ಟು ಜಾಲ್ತಿಯಲ್ಲಿದ್ದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಇದುವರೆಗೆ ರಾಜ್ಯದಲ್ಲಿ 20,712 ಮಂದಿ ಮರಣ ಹೊಂದಿದ್ದಾರೆ.
ಬೆಂಗಳೂರಿನಲ್ಲಿ 15,191 ಹೊಸ ಪ್ರಕರಣಗಳು ದಾಖಲಾಗಿದ್ದು, 161 ಮಂದಿ ನಿಧನರಾಗಿದ್ದಾರೆ. 16,084 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ನಗರದಲ್ಲಿ ಒಟ್ಟು 10,14,994 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 6,46,305 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 3,59,565 ಸೋಂಕಿತರ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇದನ್ನು ಓದಿ: ಕೋವಿಡ್ ಲಸಿಕೆ: ಎರಡನೇ ಡೋಸ್ಗೆ ಮಾತ್ರ ಆದ್ಯತೆ
ಕೋವಿಡ್ ಲಸಿಕೆ ವಿತರಣೆಯು 118ನೇ ದಿನಕ್ಕೆ ತಲುಪಿದ್ದು, ಕಳೆದ 24 ಗಂಟೆಯ ಅವಧಿಯಲ್ಲಿ ಮಧ್ಯಾಹ್ನ 3.30ಕ್ಕೆ ಬಿಡುಗಡೆಯಾದ ವರದಿಯಂತೆ 68,658 ಲಸಿಕೆ ವಿತರಣೆ ಮಾಡಲಾಗಿದೆ. ಇದುವರೆಗೆ 1,09,76,189 ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.