ಬಳ್ಳಾರಿ: ಕೋವಿಡ್-19 ಎರಡನೇ ಅಲೆಯು ರಾಜ್ಯವನ್ನು ಅಪ್ಪಳಿಸಿರುವ ಈ ಸಂದರ್ಭದಲ್ಲಿ ಆರೋಗ್ಯ ವಿತರಣಾ ವ್ಯವಸ್ಥೆಯು ಕುಸಿದಿರುವುದು ನಾವು ತೀವ್ರ ದುಖಃ ಹಾಗೂ ನೋವಿನಿಂದ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಪೀಡಿತರಾದ ಜನರ ಸಂಖ್ಯೆಯಲ್ಲಿ ಗಂಭೀರ ಪ್ರಮಾಣದ ಹೆಚ್ಚಳ ಉಂಟಾಗಿದೆ. ಪ್ರತಿದಿನ ಸಾವಿರಾರು ಮಂದಿ ಕೋವಿಡ್ ಬಾಧಿತರಾಗುತ್ತಿದ್ದು, ನೂರಾರು ಮಂದಿ ಸಾವನ್ನಪ್ಪುತ್ತಿದ್ದಾರೆ.
ಇದನ್ನು ಓದಿ: ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರಾಜಕೀಯ ಪಕ್ಷಗಳು
ಈ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ಸರಕಾರವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಸಂಘಟನೆ ವತಿಯಿಂದ ಆನ್‌ಲೈನ್ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದ ಸಂಘಟನೆಯು ಯಾವುದೇ ಮೂಲ ಸೌಲಭ್ಯಗಳು ಇಲ್ಲದೆ ಜನರು ಕೋವಿಡ್ ಲಸಿಕೆ, ಸರಿಯಾದ ಸಮಯಕ್ಕೆ ಆಂಬುಲೆನ್ಸ್, ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಸಿಗದೇ ಗಂಭೀರ ಪರಿಸ್ಥಿತಿಗೆ ಒಳಗಾಗಿ ಹೆಚ್ಚಿನ ಜನರು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ನಮ್ಮ ಸಂಘಟನೆಯು ಸರ್ಕಾರದ ನಿರ್ಲಕ್ಷ ಧೋರಣೆಯನ್ನು ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು ಎಂದು ಮುಖಂಡರು ತಿಳಿಸಿದ್ದಾರೆ.
ಇದನ್ನು ಓದಿ: “ನೀವು ಉಳೀತಿರೋ ಇಲ್ವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು” ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ
ಇಂದು ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಎಐಎಂಎಸ್‌ಎಸ್ ಪ್ರತಿಭಟನೆಯಲ್ಲಿ ಮಹಿಳೆಯರು ಅಭೂತಪೂರ್ವ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಸಂಘದ ಪ್ರಮುಖ ಬೇಡಿಕೆಗಳು: ಕೇಂದ್ರ ವಿಸ್ತಾಗೆ ಯೋಜನೆಗೆ ವಿನಿಯೋಗಿಸಿರುವ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುವುದು ನಿಲ್ಲಿಸಿ, ಅವಶ್ಯಕವಿರುವಷ್ಟು ಹಾಸಿಗೆಗಳು, ಆಕ್ಸಿಜನ್, ಔಷಧಿಗಳು ಇನ್ನಿತರ ಅಗತ್ಯತೆಗಳನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಉಚಿತವಾಗಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸಾರ್ವತ್ರಿಕ ಉಚಿತ ಲಸಿಕೆಯನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.
ವರದಿ: ಪಂಪನಗೌಡ.ಬಿ. ಬಳ್ಳಾರಿ