ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ಮಾದರಿಯ ಹೊಸ ಪ್ರಕರಣ ಪತ್ತೆ ಆಗಿಲ್ಲ: ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ

ನವದೆಹಲಿ: ಕೋವಿಡ್‌ ವೈರಸ್‌ ರೂಪಾಂತರ ಓಮಿಕ್ರಾನ್‌ಗೆ ಸಂಬಂಧಿಸಿದ ಒಂದೇ ಒಂದು ಪ್ರಕರಣ ಕೂಡ ಈವರೆಗೂ ದೇಶದ ಯಾವುದೇ ಭಾಗದಲ್ಲಿಯೂ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನುಸುಖ್‌ ಮಾಂಡವೀಯ ಹೇಳಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿಕೆ ನೀಡಿದ್ದಾರೆ. ಭಾರತದಲ್ಲಿ ಇಲ್ಲಿಯವರೆಗೆ ಓಮಿಕ್ರಾನ್ ಕೊವಿಡ್ -19 ರೂಪಾಂತರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತಾ ಹೇಳಿದರು.

ಇದನ್ನು ಓದಿ: ಲಾಕ್‌ಡೌನ್ ಪ್ರಸ್ತಾವನೆ ಇಲ್ಲ-ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ: ಸಚಿವ ಡಾ. ಕೆ. ಸುಧಾಕರ್

ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಅಥವಾ ಬಿ.1.1.529 ರೂಪಾಂತರದ ಅಪಾಯದ ಬಗ್ಗೆ ಕೇಂದ್ರ ಸರ್ಕಾರವು ದೇಶದಲ್ಲಿ ಈ ರೂಪಾಂತರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಶಂಕಿತ ಪ್ರಕರಣಗಳನ್ನು ತ್ವರಿತವಾಗಿ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ. ಜಿನೋಮ್‌ ಅನುಕ್ರಮಗಳನ್ನು ಪಾಲಿಸುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕದಿಂದ ನಾವು ಈಗಾಗಲೇ ಬಹಳಷ್ಟು ಕಲಿತಿದ್ದೇವೆ. ಪ್ರಸ್ತುತ ನಮ್ಮಲ್ಲಿ ಸಾಕಷ್ಟು ಪ್ರಯೋಗಾಲಯಗಳು, ಸಂಪನ್ಮೂಲಗಳಿವೆ. ಈ ಸಂದಿಗ್ಧತೆಯನ್ನು ನಿರ್ವಹಿಸಲು ನಾವು ಸಮರ್ಥರಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯವು ದೇಶದಲ್ಲಿ ಕೋವಿಡ್ -19 ಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ನಿರ್ಬಂಧಗಳನ್ನು ವರ್ಷಾಂತ್ಯದವರೆಗೆ (ಡಿಸೆಂಬರ್ 31) ವಿಸ್ತರಿಸಲಾಗುವುದು ಎಂದು ಘೋಷಿಸಿತು. ಓಮಿಕ್ರಾನ್ ರೂಪಾಂತರದ ಹೊರಹೊಮ್ಮುವಿಕೆಯ ಬೆಳಕಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ನೀಡಿದ ಸಲಹೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ.

ಹಿಂದಿನ ದಿನ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ಸಮಯದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲು ಪರೀಕ್ಷಾ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ಅವರ ಸಂಪರ್ಕಗಳನ್ನು ಪತ್ತೆಹಚ್ಚಲು ಸಲಹೆ ನೀಡಲಾಯಿತು.

ದೇಶದಲ್ಲಿಮನೆ-ಮನೆಗೆ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ ಮತ್ತು ಡಿಸೆಂಬರ್ 31 ರವರೆಗೆ ದೇಶದ ಎಲ್ಲಾ ಅರ್ಹ ಜನಸಂಖ್ಯೆಗೆ ಮೊದಲ ಡೋಸ್ ಚುಚ್ಚುಮದ್ದನ್ನು ಕೇಂದ್ರೀಕರಿಸಿ ಮತ್ತು ಎರಡನೇ ಡೋಸ್ ನೀಡುವಲ್ಲಿ ಹಿನ್ನಡೆಯನ್ನು ಪೂರ್ಣಗೊಳಿಸಲು ಕಾರ್ಯವೆಸಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *