ಭಾರತದಲ್ಲಿ ಕೊರೋನಾ ವೈರಸ್ ಮತ್ತಷ್ಟು ಹೆಚ್ಚಳ

ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ 3,60,960 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 3293 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 2,01,187ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 29,78,709ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 2,61,162 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,48,17,371ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ ದಿನ 17,23,912 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,27,03,789 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೊರೊನಾ ಪ್ರಕರಣಗಳ ಅಂಕಿ-ಅಂಶ

  • ಒಟ್ಟು ಪ್ರಕರಣಗಳು: 1,79,97,267
  • ಒಟ್ಟು ಗುಣಮುಖರಾದವರು: 1,48,17,371
  • ಈವರೆಗೆ ಸಾವನ್ನಪ್ಪಿದವರ ಸಂಖ್ಯೆ: 2,01,187
  • ಈವರೆಗಿನ ವ್ಯಾಕ್ಸಿನೇಷನ್: 14,78,27,367
Donate Janashakthi Media

Leave a Reply

Your email address will not be published. Required fields are marked *