ನವದೆಹಲಿ: ಕೋವಿಡ್ ಲಸಿಕೆಯಲ್ಲಿ ಅಡ್ಡಪರಿಣಾಮಗಳು ಬಂದಿರುವುವರಿಂದ ಲಸಿಕೆಗೆ ಬೇಡಿಕೆ ಕಡಿಮೆಯಾಗಿದ್ದು, ಇದರ ಬೆನ್ನಲ್ಲೇ ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಸ್ಟ್ರಾಜೆನೆಕಾ ಘೋಷಣೆ ಮಾಡಿದೆ.
ವಾಣಿಜ್ಯ ಕಾರಣಗಳಿಗಾಗಿ ಲಸಿಕೆಯನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಅನೇಕ ಕೋವಿಡ್ ರೂಪಾಂತರಗಳಿಗೆ ಲಸಿಕೆಗಳಿದ್ದು, ನಮ್ಮ ಸಂಸ್ಥೆಯ ಲಸಿಕೆಯ ಬೇಡಿಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಸಂಸ್ಥೆಯು ಯಾವುದೇ ಕೋವಿಡ್ ಲಸಿಕೆಯನ್ನು ತಯಾರಿಸುವುದಿಲ್ಲ ಅಥವಾ ಪೂರೈಕೆ ಮಾಡುವುದಿಲ್ಲ ಎಂದು ಆಸ್ಟ್ರಾಜೆನೆಕಾ ಹೇಳಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಅಸ್ಟ್ರಾಜೆನೆಕಾ
ಇದನ್ನು ಓದಿ : ಜನರನ್ನು ತಪ್ಪುದಾರಿಗೆಳೆಯುವ ಹೇಳಿಕೆಯನ್ನು ಬಿಜೆಪಿ ವಾಪಸು ಪಡೆಯಲಿ – ಸಿಎಂ ಸಿದ್ದರಾಮಯ್ಯ
ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ನವೀಕರಿಸಿದ ಲಸಿಕೆಗಳ ಹೆಚ್ಚುವರಿಯಾಗಿ ಲಭ್ಯವಿದೆ. ಇದು ಲಸಿಕೆಗೆ ಬೇಡಿಕೆಯಲ್ಲಿ ಕುಸಿತಕ್ಕೆ ಕಾರಣವಾಗಿದೆ. ಹೀಗಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಕಂಪನಿ ತಿಳಿಸಿದೆ.
ಮಾರ್ಚ್ 5ರಂದು ಸಂಸ್ಥೆಯು ಲಸಿಕೆ ಹಿಂಪಡೆಯಲು ಅರ್ಜಿ ಸಲ್ಲಿಸಿದ್ದು, ಮೇ 7ರಿಂದ ಜಾರಿಗೆ ಬಂದಿದೆ. ಲಸಿಕೆಯನ್ನು ಮಾರುಕಟ್ಟೆಯಿಂದ ಹಿಂಪಡೆಯುವ ನಿರ್ಧಾರದ ಬೆನ್ನಲ್ಲೇ ಯುರೋಪಿಯನ್ ಯೂನಿಯನ್ ಈ ಲಸಿಕೆಯನ್ನು ಬಳಸುವುದಿಲ್ಲ ಎಂದು ಹೇಳಿದೆ.
ಇದನ್ನು ನೋಡಿ : ದ್ವೇಷದ ಜಾಹೀರಾತಿನ ಮೂಲಕ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಬಿಜೆಪಿಯವರ ಮೇಲೆ ಕ್ರಮಕ್ಕೆ ಆಗ್ರಹJanashakthi Media