ಕಾಂಗ್ರೆಸ್‌ ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ

ಚನ್ನಪಟ್ಟಣ: ಕಾಂಗ್ರೆಸ್ ತನ್ನ ಶಕ್ತಿಯನ್ನು ಚನ್ನಪಟ್ಟಣದಲ್ಲಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್‌

ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನ ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾ‌ ಹಾಗೂ ತಮ್ಮ ಬೆಂಬಲಿಗರ ಜೊತೆ ಭರ್ಜರಿ ರೋಡ್‌ ಶೋ ನಡೆಸಿದರು. ಈ ವೇಳೆ ಹಲವಾರು ಕಾಂಗ್ರೆಸ್‌ ಕಾರ್ಯಕರ್ತರು ಸಾಥ್ ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ : ಯೋಗೇಶ್ವರ್

ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ಆರಂಭಿಸಿದೆ. ನಂತರ ಕಾಂಗ್ರೆಸ್ ಪಕ್ಷ ಬಿಟ್ಟಿದ್ದ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳಿಂದ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವೇ ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ನಾನಿದ್ದ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ನಿ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿರಲಿಲ್ಲ ಎಂದು ಮನಗಂಡು ಸ್ವಯಂಪ್ರೇರಿತವಾಗಿ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದರು.

ಯೋಗೇಶ್ವರ್ ಪಕ್ಷಕ್ಕೆ ಸೇರಿರುವುದು ಆನೆ ಬಲ ಬಂದಂತಾಗಿದೆ

ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಆರಂಭಿಸಿದವರು. ಹೀಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಅವರು ಹೊಸಬರಲ್ಲ. ಇಂದು ಅವರು ಪಕ್ಷಕ್ಕೆ ಸೇರಿರುವುದು ಆನೆ ಬಲ ಬಂದಂತಾಗಿದೆ. ಕೇವಲ ಚನ್ನಪಟ್ಟಣ ಮತ್ತು ರಾಮನಗರ ಜಿಲ್ಲೆ ಮಾತ್ರವಲ್ಲ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದೆ. ಇಂದು ಮನೆಗೆ ಮರಳಿರುವ ಯೋಗೇಶ್ವರ್ ಅವರನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

ಇದನ್ನೂ ಓದಿ: ಹಾಸನ ಲೈಂಗಿಕ ದೌರ್ಜನ್ಯ| ಪೆನ್‌ಡ್ರೈವ್ ಪ್ರಕರಣ – ಪ್ರಜ್ವಲ್​ಗಿಲ್ಲ ಬೇಲ್, ಜೈಲು ಗ್ಯಾರಂಟೀನಾ?? – ಕೆಎಸ್ ವಿಮಲಾ

Donate Janashakthi Media

Leave a Reply

Your email address will not be published. Required fields are marked *