ಚೆನ್ನೈ: 2021ನೇ ಸಾಲಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಅಲ್ ಇಂಡಿಯಾ ಅಣ್ಣ ಡ್ರಾವಿಡ ಮುನ್ನೇತ್ರ ಕಳಗಂ-ಎಐಎಡಿಎಂಕೆ ಪಕ್ಷದ ಜನವಿರೋಧಿ ಹಾಗೂ ಬಿಜೆಪಿಯೊಂದಿಗೆ ಸಖ್ಯತೆಯ ವಿರುದ್ಧ ಡಿಎಂಕೆ ಮೈತ್ರಿಕೂಟದ ಭಾಗವಾಗಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದವು.
ಆರು ಕ್ಷೇತ್ರಗಳಲ್ಲಿ ಸ್ಫರ್ಧೆಯಲ್ಲಿ ಪ್ರಬಲವಾದ ಪೈಪೋಟಿಯನ್ನು ನೀಡಿದ ಸಿಪಿಐ(ಎಂ) ಪಕ್ಷವು ಅಂತಿಮವಾಗಿ ಫಲಿತಾಂಶ ಪ್ರಕಟಗೊಂಡು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ. ಗಧರ್ವಕೊಟೈ ಕ್ಷೇತ್ರದಿಂದ ಎಂ. ಚಿನ್ನದೊರೈ ಹಾಗೂ ಕಿಲ್‌ವೆಲ್ಲೂರು ಕ್ಷೇತ್ರದಿಂದ ನಾಗೈ ಮಣಿ ಅವರು ಭರ್ಜರಿ ಗೆಲುವನ್ನು ದಾಖಲಿಸಿದ್ದಾರೆ.
ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗಳ ವಿವರ
ಡಿಂಡಿಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಪಾಂಡಿ ಎನ್. ಅವರು 72848 ಮತಗಳನ್ನು ಪಡೆದು ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಆ ಕ್ಷೇತ್ರದಲ್ಲಿ 90595 ಮತಗಳನ್ನು ಪಡೆದ ಎಐಎಡಿಎಂಕೆ ಪಕ್ಷದ ಅಭ್ಯರ್ಥಿ ಶ್ರೀನಿವಾಸನ್ ಸಿ ಜಯಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ 21 ಜನ ಅಭ್ಯರ್ಥಿಗಳು ಕಣದಲ್ಲಿದ್ದರು.
ಇದನ್ನು ಓದಿ: ಸಿಪಿಐ(ಎಂ)ನ ಎಂ ಚಿನ್ನದೊರೈಗೆ ಭರ್ಜರಿ ಜಯ
ಹರೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಕುಮಾರ್ ಎ ಅವರು 68699 ಮತಗಳನ್ನು ಗಳಿಸಿ ಎರಡನೇ ಸ್ಥಾನವನ್ನು ಪಡೆದಿದ್ದಾರೆ. ಆ ಕ್ಷೇತ್ರದಲ್ಲಿ 99061 ಮತಗಳನ್ನು ಪಡೆದ ಎಐಎಡಿಎಂಕೆ ಪಕ್ಷದ ಅಭ್ಯರ್ಥಿ ಸಂಪತ್ ಕುಮಾರ್ ವಿ ಅವರು ಜಯಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ತಿರುಪರಕುದ್ರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಮಹಿಳಾ ಅಭ್ಯರ್ಥಿ ಪೊನ್ನುತಾಯಿ ಅವರು 74194 ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಇಲ್ಲಿ ಎಐಎಡಿಎಂಕೆ ಪಕ್ಷದ ರಾಜನ್‌ಚೆಲ್ಲಪ್ಪ ವಿ ವಿ ಅವರು 1,03,683 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದರು.
ಇದನ್ನು ಓದಿ: 51 ಸಾವಿರ ಅಂತರದ ಗೆಲವು ಸಾಧಿಸಿದ ನಾಗೈ ಮಣಿ
ಕೋವಿಲ್‌ಪಟ್ಟಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಕೆ ಶ್ರೀನಿವಾಸನ್ ಅವರು 37380 ಮತಗಳನ್ನು ಪಡೆದು ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಈ ಕ್ಷೇತ್ರದಿಂದ ಎಐಎಡಿಎಂಕೆ ಪಕ್ಷದಿಂದ ಸ್ಪರ್ಧಿಸಿದ ಕದಂಬೂರು ರಾಜು ಜಯಗಳಿಸಿದ್ದಾರೆ. ಇದೇ ಕ್ಷೇತ್ರದಿಂದ ಸ್ಪರ್ಧಿಸಿದ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ(ಎಎಂಎಂಕೆ) ಪಕ್ಷದ ನಾಯಕ ಟಿಟಿವಿ ದಿನಕರನ್ ಎರಡನೇ ಸ್ಥಾನ ಸ್ಥಾನಕ್ಕೆ ತಳ್ಳಲ್ಪಟ್ಟು ಸೋಲುಂಡಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 26 ಅಭ್ಯರ್ಥಿಗಳು ಕಣದಲ್ಲಿದ್ದರು.
ಇದನ್ನು ಓದಿ: ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಸೋಲು – ಸಿಪಿಐ(ಎಂ) ಪೊಲಿಟ್ ಬ್ಯುರೊ
ಸಿಪಿಐ(ಎಂ) ಪಕ್ಷವು ಮೂರು ಕ್ಷೇತ್ರದಲ್ಲಿ ಅತ್ಯಂತ ಪ್ರಬಲವಾದ ಪೈಪೋಟಿಯನ್ನು ನೀಡಿ ಚುನಾವಣೆ ಎದುರಿಸಿದ್ದು ಅಂತಿಮವಾಗಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕೋವಿಲ್‌ಪಟ್ಟಿ ವಿಧಾನಸಭಾ ಕ್ಷೇತ್ರದಲ್ಲೂ ಸಹ ತೀವ್ರ ಪೈಪೋಟಿ ನೀಡಿದ ಸಿಪಿಐ(ಎಂ) ಪಕ್ಷವು ಇಡೀ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಕ್ಷೇತ್ರವೆನಿಸಿಕೊಂಡಿರುವ ಕೋವಿಲ್‌ಪಟ್ಟಿಯಲ್ಲೂ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಗಿದೆ.