ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಧಾರವಾಡದ 11ನೇ ವಾರ್ಡಿನಿಂದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಅಭ್ಯರ್ಥಿಯಾಗಿ ಬಿ.ಐ.ಈಳಿಗೇರ ನಾಮಪತ್ರ ಸಲ್ಲಿಸಿದರು. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ.
ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಅವರು ಹಲವು ದಶಕಗಳ ಕಾಲ ನಮ್ಮ ವಾರ್ಡಿನಲ್ಲಿ ಹಲವು ರಚನಾತ್ಮಕ ಕೆಲಸಗಳನ್ನು ಮಾಡಿದ್ದೇನೆ. ಜನಪರವಾದ ಹಲವಾರು ಹೋರಾಟಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ. ಸಾಂಸ್ಕೃತಿಕ ಕೇತ್ರದಲ್ಲಿ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದೇನೆ ವಾರ್ಡಿನ ಜನ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದರು.
ಇದನ್ನು ಓದಿ: ಸೆಪ್ಟಂಬರ್ 3ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ
ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಹೇಶ ಪತ್ತಾರ, ಮುಖಂಡರಾದ ಬಿ.ಎಸ್.ಸೊಪ್ಪಿನ, ಬಿ.ಎನ್.ಪೂಜಾರಿ, ಎ.ಎಂ.ಖಾನ್, ಗುರುಸಿದ್ದಪ್ಪ ಅಂಬಿಗೇರ, ಭೀಮಸೇನ ಕಾಗಿ, ಜೋಷಫ್ ಮಲ್ಲಾಡಿ, ಭೀಮನಗೌಡ, ಸಂತೋಶ ಕುರುಬರ ಮುಂತಾದವರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡದಲ್ಲಿ 82 ವಾರ್ಡ್‌ಗಳು, ಕಲಬುರಗಿಯ 55 ವಾರ್ಡ್‌ಗಳು ಮತ್ತು ಬೆಳಗಾವಿಯ 58 ವಾರ್ಡ್‌ಗಳು. ದೊಡ್ಡಬಳ್ಳಾಪುರ, ತರೀಕೆರೆ ಮತ್ತು ಇತರ ಕೆಲವು ಸ್ಥಳಗಳ ನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆಯಾಗಿದೆ.
ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.